ಯೆರೆಮಿಯ 44:5

ಆದರೆ ಅವರು ಕೇಳಲಿಲ್ಲ; ತಮ್ಮ ಕೆಟ್ಟತನದಿಂದ ತಿರುಗದೆಯೂ, ಬೇರೆ ದೇವರುಗಳಿಗೆ ಧೂಪಸುಡು ವದನ್ನು ಬಿಡದೆಯೂ ಇದ್ದರು; ನನ್ನ ಮಾತಿಗೆ ಕಿವಿ ಗೊಡಲಿಲ್ಲ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 44

3ಅವರು ನನಗೆ ಕೋಪವನ್ನು ಎಬ್ಬಿಸುವ ಹಾಗೆ ತಾವೂ ತಮ್ಮ ತಂದೆಗಳೂ ಅರಿಯದ ಬೇರೆ ದೇವರುಗಳನ್ನು ಸೇವಿಸಿ ಧೂಪಸುಟ್ಟು ಮಾಡಿದ ಕೆಟ್ಟತನದ ನಿಮಿತ್ತ ಇಗೋ, ಅವು ಈ ಹೊತ್ತು ಹಾಳಾಗಿವೆ; ಅವುಗಳಲ್ಲಿ ವಾಸಮಾಡುವವರು ಯಾರೂ ಇಲ್ಲ.

4ಆದಾಗ್ಯೂ ನಾನು ನಿಮ್ಮ ಬಳಿಗೆ ನನ್ನ ಸೇವಕರಾದ ಪ್ರವಾದಿಗಳೆಲ್ಲರನ್ನು ಬೆಳಿಗ್ಗೆ ಎದ್ದು ಕಳುಹಿಸಿ--ಓ, ನಾನು ಹಗೆಮಾಡುವ ಈ ಅಸಹ್ಯವಾದ ಕಾರ್ಯವನ್ನು ಮಾಡಲೇ ಬೇಡಿರೆಂದು ಹೇಳಿದೆನು.

5ಆದರೆ ಅವರು ಕೇಳಲಿಲ್ಲ; ತಮ್ಮ ಕೆಟ್ಟತನದಿಂದ ತಿರುಗದೆಯೂ, ಬೇರೆ ದೇವರುಗಳಿಗೆ ಧೂಪಸುಡು ವದನ್ನು ಬಿಡದೆಯೂ ಇದ್ದರು; ನನ್ನ ಮಾತಿಗೆ ಕಿವಿ ಗೊಡಲಿಲ್ಲ.

6ಆದದರಿಂದ ನನ್ನ ಉರಿಯೂ ನನ್ನ ಕೋಪವೂ ಹೊಯ್ಯಲ್ಪಟ್ಟು, ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಉರಿಯಿತು; ಅವು ಈ ಹೊತ್ತಿನಂತೆ ಹಾಳೂ ಬೀಡೂ ಆದವು.

7ಆದದರಿಂದ ಈಗ ಇಸ್ರಾಯೇಲಿನ ದೇವರೂ ಸೈನ್ಯಗಳ ದೇವರೂ ಆಗಿರುವ ಕರ್ತನು ಹೀಗೆ ಹೇಳುತ್ತಾನೆ--ಯಾಕೆ ನಿಮಗೆ ಉಳಿದಿರುವ ವರನ್ನು ಮಿಗಿಸದ ಹಾಗೆ ನೀವು ಗಂಡಸರನ್ನೂ ಹೆಂಗಸರನ್ನೂ ಮಗುವನ್ನೂ ಮೊಲೆ ಕೂಸನ್ನೂ ಯೆಹೂದದೊಳಗಿಂದ ಕಡಿದುಬಿಟ್ಟು ನಿಮ್ಮ ಪ್ರಾಣ ಗಳಿಗೆ ದೊಡ್ಡ ಕೇಡನ್ನು ಮಾಡಿಕೊಳ್ಳು ತ್ತೀರಿ?

ಯೆರೆಮಿಯ 44 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी