೧ ಅರಸುಗಳು 15:25

ಯೆಹೂದದ ಅರಸನಾದ ಆಸನ ಎರಡನೇ ವರುಷದಲ್ಲಿ ಯಾರೊಬ್ಬಾಮನ ಮಗನಾದ ನಾದಾಬನು ಇಸ್ರಾಯೇಲಿನ ಮೇಲೆ ಆಳಲು ಆರಂಭಿಸಿ ಎರಡು ವರುಷ ಆಳಿದನು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 15

23ಆಸನ ಮಿಕ್ಕಾದ ಎಲ್ಲಾ ಕ್ರಿಯೆಗಳೂ ಅವನ ಸಮಸ್ತ ಪರಾಕ್ರಮವೂ ಅವನು ಮಾಡಿದ್ದೆಲ್ಲವೂ ಅವನು ಕಟ್ಟಿಸಿದ ಪಟ್ಟಣಗಳೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯ ಲ್ಪಡಲಿಲ್ಲವೋ? ಆದರೆ ತನ್ನ ವೃದ್ದಾಪ್ಯದ ಕಾಲದಲ್ಲಿ ಅವನು ತನ್ನ ಕಾಲುಗಳಲ್ಲಿ ಅಸ್ವಸ್ಥನಾಗಿದ್ದನು.

24ಆಸನು ತನ್ನ ಪಿತೃಗಳ ಸಂಗಡ ಮಲಗಿದನು; ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ತನ್ನ ಪಿತೃಗಳ ಸಂಗಡ ಹೂಣಿಡಲ್ಪಟ್ಟನು. ಅವನಿಗೆ ಬದ ಲಾಗಿ ಅವನ ಮಗನಾದ ಯೆಹೋಷಾಫಾಟನು ಆಳಿದನು.

25ಯೆಹೂದದ ಅರಸನಾದ ಆಸನ ಎರಡನೇ ವರುಷದಲ್ಲಿ ಯಾರೊಬ್ಬಾಮನ ಮಗನಾದ ನಾದಾಬನು ಇಸ್ರಾಯೇಲಿನ ಮೇಲೆ ಆಳಲು ಆರಂಭಿಸಿ ಎರಡು ವರುಷ ಆಳಿದನು.

26ಆದರೆ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಪಾಪಮಾಡಲು ಇಸ್ರಾಯೇಲ್ಯರನ್ನು ಪ್ರೇರೇಪಿಸಿದ ಅವನ ತಂದೆಯ ಪಾಪದಲ್ಲಿಯೂ ಅವನ ಮಾರ್ಗದಲ್ಲಿಯೂ ನಡೆದನು.

27ಇಸ್ಸಾಕಾರನ ಮನೆಯವನಾಗಿರುವ ಅಹೀಯನ ಮಗನಾದ ಬಾಷನು ಅವನಿಗೆ ವಿರೋಧವಾಗಿದ್ದು ಫಿಲಿಷ್ಟಿಯರಿಗೆ ಉಂಟಾದ ಗಿಬ್ಬೆತೋನಿನಲ್ಲಿ ಅವನನ್ನು ಹೊಡೆದುಬಿಟ್ಟನು. ಯಾಕಂದರೆ ನಾದಾಬನೂ ಸಮಸ್ತ ಇಸ್ರಾಯೇಲ್ಯರೂ ಗಿಬ್ಬೆತೋನಿಗೆ ಮುತ್ತಿಗೆ ಹಾಕುತ್ತಾ ಇದ್ದರು.

೧ ಅರಸುಗಳು 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी