೨ ಪೂರ್ವಕಾಲವೃತ್ತಾಂತ 30:17

ಯಾಕಂದರೆ ಸಭೆಯಲ್ಲಿ ಅನೇಕರು ಅಪರಿಶುದ್ಧರಾಗಿದ್ದರು, ಲೇವಿಯರು ಅಶುದ್ಧರಾದ ಎಲ್ಲರ ನಿಮಿತ್ತ ಅವರನ್ನು ಕರ್ತನಿಗೆ ಪರಿಶುದ್ಧ ಮಾಡುವ ಹಾಗೆ ಪಸ್ಕದ ಬಲಿಗಳನ್ನು ವಧಿಸುವದಕ್ಕೆ ಇದ್ದರು.

ಸಂದರ್ಭದೊಂದಿಗೆ ಓದಿ · ೨ ಪೂರ್ವಕಾಲವೃತ್ತಾಂತ 30

15ಎರಡನೇ ತಿಂಗಳ ಹದಿನಾಲ್ಕನೇ ದಿವಸದಲ್ಲಿ ಪಸ್ಕ ವನ್ನು ವಧಿಸಿದರು. ಯಾಜಕರೂ ಲೇವಿಯರೂ ಲಜ್ಜೆ ಯನ್ನು ಹೊಂದಿ ತಮ್ಮನ್ನು ಪರಿಶುದ್ಧ ಮಾಡಿಕೊಂಡು ಕರ್ತನ ಮನೆಯೊಳಗೆ ದಹನಬಲಿಗಳನ್ನು ತಂದರು.

16ಇದಲ್ಲದೆ ಅವರು ದೇವರ ಮನುಷ್ಯನಾದ ಮೋಶೆ ಯ ನ್ಯಾಯಪ್ರಮಾಣದ ಹಾಗೆ ತಮ್ಮ ಪದ್ಧತಿಯ ಪ್ರಕಾರ ತಮ್ಮ ತಮ್ಮ ಸ್ಥಳದಲ್ಲಿ ನಿಂತು ಯಾಜಕರು ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಚಿಮುಕಿಸಿದರು.

17ಯಾಕಂದರೆ ಸಭೆಯಲ್ಲಿ ಅನೇಕರು ಅಪರಿಶುದ್ಧರಾಗಿದ್ದರು, ಲೇವಿಯರು ಅಶುದ್ಧರಾದ ಎಲ್ಲರ ನಿಮಿತ್ತ ಅವರನ್ನು ಕರ್ತನಿಗೆ ಪರಿಶುದ್ಧ ಮಾಡುವ ಹಾಗೆ ಪಸ್ಕದ ಬಲಿಗಳನ್ನು ವಧಿಸುವದಕ್ಕೆ ಇದ್ದರು.

18ಯಾಕಂದರೆ ಜನರಲ್ಲಿ ಅನೇಕರು--ಎಫ್ರಾ ಯಾಮ್‌, ಮನಸ್ಸೆ, ಇಸ್ಸಾಕಾರ್‌, ಜೆಬುಲೂನ್‌ ಇವ ರಲ್ಲಿ ಅನೇಕರು ತಮ್ಮನ್ನು ಶುದ್ಧ ಮಾಡಿಕೊಳ್ಳದೆ, ಬರೆಯಲ್ಪಟ್ಟ ಪ್ರಕಾರವಲ್ಲದೆ ಪಸ್ಕವನ್ನು ಉಂಡರು.

19ಆದರೆ ಹಿಜ್ಕೀಯನು ಅವರಿಗೋಸ್ಕರ ಪ್ರಾರ್ಥಿಸಿಯಾವನಾದರೂ ಪರಿಶುದ್ಧ ಸ್ಥಾನದ ಶುದ್ಧಿಯ ಪ್ರಕಾರ ಶುಚಿಯಾಗದೆ ಇದ್ದರೂ ತನ್ನ ಪಿತೃಗಳ ಕರ್ತನಾದ ದೇವರಾಗಿರುವ ದೇವರನ್ನು ಹುಡುಕಲು ತನ್ನ ಹೃದಯ ವನ್ನು ಸಿದ್ಧಮಾಡುವವನ ಪಾಪವನ್ನು ದಯವುಳ್ಳ ಕರ್ತನು ಮುಚ್ಚಲಿ ಎಂದು ಹೇಳಿದನು.

೨ ಪೂರ್ವಕಾಲವೃತ್ತಾಂತ 30 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी