೧ ಅರಸುಗಳು 10:11

ಇದಲ್ಲದೆ ಹೀರಾಮನ ಹಡಗುಗಳು ಓಫಿರಿನಿಂದ ಬಂಗಾರವನ್ನೂ ಅನೇಕ ಅಲ್ಮುಗ್‌ ಮರಗಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ತಂದವು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 10

9ನಿನ್ನನ್ನು ಇಸ್ರಾಯೇಲಿನ ಸಿಂಹಾಸನದ ಮೇಲೆ ಕೂಡ್ರಿಸುವ ಹಾಗೆ ನಿನ್ನಲ್ಲಿ ಇಷ್ಟಪಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ. ಕರ್ತನು ಯುಗಯುಗಕ್ಕೂ ಇಸ್ರಾಯೇಲನ್ನು ಪ್ರೀತಿ ಮಾಡಿದ್ದರಿಂದ ನ್ಯಾಯವನ್ನೂ ನೀತಿಯನ್ನೂ ನಡಿಸಲು ಆತನು ನಿನ್ನನ್ನು ಅರಸನಾಗ ಮಾಡಿದನು ಅಂದಳು.

10ಅವಳು ಅರಸನಿಗೆ ನೂರ ಇಪ್ಪತ್ತು ತಲಾಂತು ಚಿನ್ನವನ್ನೂ ಬಹುಸಮೃದ್ಧಿಯಾದ ಸುಗಂಧದ್ರವ್ಯಗ ಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟ ಅಪರಿಮಿತವಾದ ಸುಗಂಧಗಳ ಹಾಗೆ ಇನ್ನೆಂದೂ ಬಂದದ್ದಿಲ್ಲ.

11ಇದಲ್ಲದೆ ಹೀರಾಮನ ಹಡಗುಗಳು ಓಫಿರಿನಿಂದ ಬಂಗಾರವನ್ನೂ ಅನೇಕ ಅಲ್ಮುಗ್‌ ಮರಗಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ತಂದವು.

12ಅರಸನು ಅಲ್ಮುಗ್‌ ಮರಗಳಿಂದ ಕರ್ತನ ಮಂದಿರಕ್ಕೋಸ್ಕರವೂ ಅರಸನ ಮನೆಗೋಸ್ಕರವೂ ಸ್ತಂಭಗಳನ್ನು ಮಾಡಿಸಿ ದನು. ಇದಲ್ಲದೆ ಅವುಗಳಿಂದ ಹಾಡುವವರಿಗೋಸ್ಕರ ಕಿನ್ನರಿಗಳನ್ನೂ ವೀಣೆಗಳನ್ನೂ ಮಾಡಿಸಿದನು; ಅಂದಿ ನಿಂದ ಈ ದಿನದ ವರೆಗೂ ಅಂಥ ಅಲ್ಮುಗ್‌ ಮರಗಳು ಬಂದದ್ದೂ ಇಲ್ಲ, ಕಂಡದ್ದೂ ಇಲ್ಲ.

13ಅರಸನಾದ ಸೊಲೊಮೋನನು ಶೆಬದ ರಾಣಿಗೆ ರಾಜನ ದಾನವಾಗಿ ಕೊಟ್ಟದ್ದು ಹೊರತಾಗಿ ಅವಳು ಇಚ್ಚೈಸಿ ಕೇಳಿದ್ದನ್ನೆಲ್ಲಾ ಸೊಲೊಮೋನನು ಅವಳಿಗೆ ಕೊಟ್ಟನು. ಆಕೆಯು ಹಿಂತಿರುಗಿ ತನ್ನ ಸೇವಕರ ಕೂಡ ತನ್ನ ಸ್ವದೇಶಕ್ಕೆ ಹೋದಳು.

೧ ಅರಸುಗಳು 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी