ಕರ್ತನು ಭೂಮಿಯ ಮೇಲೆ ಮನುಷ್ಯನನ್ನು ಉಂಟುಮಾಡಿದ್ದಕ್ಕೋಸ್ಕರ ಪಶ್ಚಾತ್ತಾಪ ಪಟ್ಟು ತನ್ನ ಹೃದಯದಲ್ಲಿ ನೊಂದುಕೊಂಡನು.
4ಆ ದಿನಗಳಲ್ಲಿ ಭೂಮಿಯ ಮೇಲೆ ಮಹಾ ಶರೀರಗಳಾದವರು ಇದ್ದರು, ಆಮೇಲೆಯೂ ಇದ್ದರು; ದೇವಕುಮಾರರು ಮನುಷ್ಯ ಕುಮಾರ್ತೆಯರನ್ನು ಕೂಡಿದಾಗ ಅವರಿಗೆ ಮಕ್ಕಳನ್ನು ಹೆತ್ತರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾದ ಪರಾಕ್ರಮಶಾಲಿ ಗಳಾಗಿದ್ದವರು.
5ಮನುಷ್ಯನ ದುಷ್ಟತ್ವವು ಭೂಮಿಯಲ್ಲಿ ಹೆಚ್ಚಿದ್ದನ್ನೂ ಅವನ ಹೃದಯದ ಆಲೋಚನೆಗಳ ಕಲ್ಪನೆಗಳೆಲ್ಲಾ ಯಾವಾಗಲೂ ಬರೀ ಕೆಟ್ಟವುಗಳೆಂದೂ ದೇವರು ನೋಡಿದನು.
6ಕರ್ತನು ಭೂಮಿಯ ಮೇಲೆ ಮನುಷ್ಯನನ್ನು ಉಂಟುಮಾಡಿದ್ದಕ್ಕೋಸ್ಕರ ಪಶ್ಚಾತ್ತಾಪ ಪಟ್ಟು ತನ್ನ ಹೃದಯದಲ್ಲಿ ನೊಂದುಕೊಂಡನು.
7ಇದಲ್ಲದೆ ಕರ್ತನು--ನಾನು ಸೃಷ್ಟಿಸಿದ ಮನುಷ್ಯ ನನ್ನೂ ಮನುಷ್ಯನ ಸಂಗಡ ಸಕಲ ಮೃಗ, ಕ್ರಿಮಿ, ಆಕಾಶದ ಪಕ್ಷಿಗಳನ್ನೂ ಭೂಮುಖದಿಂದ ನಾಶಮಾಡು ವೆನು; ನಾನು ಅವರನ್ನು ಉಂಟುಮಾಡಿದ್ದಕ್ಕೆ ಅದು ಪಶ್ಚಾತ್ತಾಪಪಡುವಂತೆ ಆಯಿತು ಅಂದನು.
8ಆದರೆ ನೋಹನಿಗೆ ಕರ್ತನ ದೃಷ್ಟಿಯಲ್ಲಿ ಕೃಪೆ ದೊರಕಿತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ