ಕೀರ್ತನೆಗಳು 40:7

ಆಗ ನಾನು--ಇಗೋ, ನಾನು ಇದ್ದೇನೆ; ಪುಸ್ತಕದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ.

ಸಂದರ್ಭದೊಂದಿಗೆ ಓದಿ · ಕೀರ್ತನೆಗಳು 40

5ಓ ನನ್ನ ದೇವರಾದ ಕರ್ತನೇ, ನೀನು ಮಾಡಿದ ನಿನ್ನ ಅದ್ಭುತ ಕಾರ್ಯಗಳೂ ನಮ್ಮ ಕಡೆಗಿರುವ ನಿನ್ನ ಯೋಚನೆಗಳೂ ಬಹಳ; ಅವುಗಳನ್ನು ಕ್ರಮವಾಗಿ ನಿನ್ನ ಮುಂದೆ ಎಣಿಸಲಾರೆನು; ಅವುಗಳನ್ನು ನಾನು ತಿಳಿಸಿ ಹೇಳಬೇಕಾದರೆ ಎಣಿಸುವದಕ್ಕಿಂತ ಹೆಚ್ಚಾಗಿವೆ.

6ಯಜ್ಞದಲ್ಲಿಯೂ ಅರ್ಪಣೆಯಲ್ಲಿಯೂ ನೀನು ಇಷ್ಟ ಪಡಲಿಲ್ಲ; ದಹನಬಲಿಯನ್ನೂ ಪಾಪದಬಲಿಯನ್ನೂ ನೀನು ಕೇಳಲಿಲ್ಲ. ನನ್ನ ಕಿವಿಗಳನ್ನು ನೀನು ತೆರೆದಿ;

7ಆಗ ನಾನು--ಇಗೋ, ನಾನು ಇದ್ದೇನೆ; ಪುಸ್ತಕದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ.

8ಓ ನನ್ನ ದೇವರೇ ನಿನಗೆ ಮೆಚ್ಚಿಕೆಯಾದದ್ದನ್ನು ಮಾಡಲು ಸಂತೋಷಿಸುತ್ತೇನೆ; ನಿನ್ನ ನ್ಯಾಯ ಪ್ರಮಾಣವು ನನ್ನ ಅಂತರಂಗದಲ್ಲಿ ಅದೆ.

9ನಾನು ನೀತಿಯನ್ನು ದೊಡ್ಡ ಸಭೆಯಲ್ಲಿ ಸಾರಿಬಿಟ್ಟಿದ್ದೇನೆ; ಇಗೋ, ಓ ಕರ್ತನೇ, ನಾನು ನನ್ನ ತುಟಿಗಳಿಗೆ ಅಡ್ಡಿ ಮಾಡಲಿಲ್ಲವೆಂಬ ಸಂಗತಿ ನೀನು ತಿಳಿದವ ನಾಗಿದ್ದೀ.

ಕೀರ್ತನೆಗಳು 40 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी