೧ ಪೇತ್ರನು 1:10

ನಿಮಗೆ ಬರಬೇಕಾಗಿದ್ದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು.

ಸಂದರ್ಭದೊಂದಿಗೆ ಓದಿ · ೧ ಪೇತ್ರನು 1

8ನೀವು ಆತನನ್ನು ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ; ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು ಹೇಳಲಶಕ್ಯವಾದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.

9ನಿಮ್ಮ ನಂಬಿಕೆಯ ಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿದ್ದೀರಿ.

10ನಿಮಗೆ ಬರಬೇಕಾಗಿದ್ದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು.

11ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಪ್ರಭಾವವನ್ನೂ ಮುಂದಾಗಿ ಸಾಕ್ಷೀಕರಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವ ನೆಂಬದನ್ನು ಅವರು ಪರಿಶೋಧನೆ ಮಾಡಿದರು.

12ಪರಲೋಕದಿಂದ ಕಳುಹಿಸಲ್ಪಟ್ಟ ಪರಿಶುದ್ಧಾತ್ಮನಿಂದ ನಿಮಗೆ ಸುವಾರ್ತೆಯನ್ನು ಸಾರಿದವರು ಈಗ ನಿಮಗೆ ತಿಳಿಸುವಂಥ ಮತ್ತು ದೂತರು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುವಂಥ ಕಾರ್ಯಗಳಲ್ಲಿ ತಮಗೋಸ್ಕರವಲ್ಲ ನಮಗೋಸ್ಕರವೇ ಸೇವೆ ಮಾಡಿದರೆಂದು ಅವರಿಗೆ ಪ್ರಕಟವಾಯಿತು.

೧ ಪೇತ್ರನು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी