ನಾನೇ ನಾನಾಗಿಯೇ ಮಾತಾಡಿದ್ದೇನೆ; ಹೌದು, ನಾನು ಅವನನ್ನು ಕರೆದು ಬರಮಾಡಿದ್ದೇನೆ; ಅವನು ಅವನ ಮಾರ್ಗವನ್ನು ಏಳಿಗೆ ಪಡಿಸುವನು.
13ನನ್ನ ಕೈ ಭೂಮಿಗೆ ಅಸ್ತಿವಾರವನ್ನು ಹಾಕಿತು; ನನ್ನ ಬಲಗೈ ಆಕಾಶವನ್ನು ಹರಡಿತು; ನಾನು ಅವುಗಳನ್ನು ಕರೆಯಲು ಅವು ಒಟ್ಟಾಗಿ ನಿಂತುಕೊಂಡವು.
14ನೀವೆಲ್ಲರೂ ಕೂಡಿಕೊಂಡು ಕೇಳಿರಿ. ಅವುಗಳ ಮಧ್ಯದಲ್ಲಿ ಈ ಸಂಗತಿಗಳನ್ನು ಪ್ರಕಟಿಸಿದವರು ಯಾರು? ಕರ್ತನು ಅವನನ್ನು ಪ್ರೀತಿಮಾಡಿದ್ದಾನೆ. ಆತನು ಬಾಬೆಲಿನಲ್ಲಿ ಅವನ ಇಷ್ಟವನ್ನು ನೆರವೇರಿಸುವನು; ಆತನ ಹಸ್ತವು ಕಸ್ದೀಯರ ಮೇಲಿರುವದು.
15ನಾನೇ ನಾನಾಗಿಯೇ ಮಾತಾಡಿದ್ದೇನೆ; ಹೌದು, ನಾನು ಅವನನ್ನು ಕರೆದು ಬರಮಾಡಿದ್ದೇನೆ; ಅವನು ಅವನ ಮಾರ್ಗವನ್ನು ಏಳಿಗೆ ಪಡಿಸುವನು.
16ನನ್ನ ಸವಿಾಪಕ್ಕೆ ಬಂದು ಇದನ್ನು ಕೇಳಿರಿ; ಆದಿಯಿಂದಲೂ ನಾನು ಗುಟ್ಟಾಗಿ ಮಾತಾಡಲಿಲ್ಲ, ಅಂದಿನಿಂದಲೂ ಅಲ್ಲಿ ನಾನು ಇದ್ದೇನೆ; ಈಗ ದೇವರಾದ ಕರ್ತನು ಆತನ ಆತ್ಮ ದೊಡನೆ ನನ್ನನ್ನು ಕಳುಹಿಸಿದ್ದಾನೆ.
17ನಿನ್ನ ವಿಮೋಚ ಕನೂ ಇಸ್ರಾಯೇಲಿನ ಪರಿಶುದ್ಧನೂ ಆಗಿರುವ ಕರ್ತನು ಹೀಗೆನ್ನುತ್ತಾನೆ--ನಿನ್ನ ಉಪಯೋಗಕ್ಕಾಗಿ ನಿನಗೆ ಬೋಧಿಸುವವನೂ ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡಿಸುವವನೂ ಆದ ನಾನೇ ನಿನ್ನ ಕರ್ತನೂ ನಿನ್ನ ದೇವರೂ ಆಗಿದ್ದೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ