ಆಗ ಅದೇ ಸೀಮೆಯಲ್ಲಿ ಕುರುಬರು ಹೊಲದಲ್ಲಿದ್ದು ರಾತ್ರಿಯಲ್ಲಿ ತಮ್ಮ ಹಿಂಡನ್ನು ಕಾಯುತ್ತಿದ್ದರು.
6ಹೀಗೆ ಅವರು ಅಲ್ಲಿ ಇದ್ದಾಗ ಆಕೆಗೆ ಹೆರಿಗೆಯ ದಿವಸಗಳು ಪೂರ್ಣವಾದವು.
7ಆಕೆಯು ತನ್ನ ಚೊಚ್ಚಲು ಮಗನನ್ನು ಹೆತ್ತು ಬಟ್ಟೆಗಳಿಂದ ಸುತ್ತಿ ಛತ್ರದಲ್ಲಿ ಅವರಿಗೆ ಸ್ಥಳವಿಲ್ಲವಾದ್ದರಿಂದ ಆತನನ್ನು ಗೋದ ಲಿಯಲ್ಲಿ ಮಲಗಿಸಿದಳು.
8ಆಗ ಅದೇ ಸೀಮೆಯಲ್ಲಿ ಕುರುಬರು ಹೊಲದಲ್ಲಿದ್ದು ರಾತ್ರಿಯಲ್ಲಿ ತಮ್ಮ ಹಿಂಡನ್ನು ಕಾಯುತ್ತಿದ್ದರು.
9ಇಗೋ, ಕರ್ತನ ದೂತನು ಅವರ ಬಳಿಗೆ ಬಂದನು. ಆಗ ಕರ್ತನ ಮಹಿಮೆಯು ಅವರ ಸುತ್ತಮುತ್ತಲೂ ಪ್ರಕಾಶಿ ಸಿತು; ಆದದರಿಂದ ಅವರು ಬಹಳವಾಗಿ ಹೆದರಿದರು.
10ಆದರೆ ದೂತನು ಅವರಿಗೆ--ಹೆದರಬೇಡಿರಿ; ಯಾಕಂದರೆ ಇಗೋ, ಎಲ್ಲಾ ಜನರಿಗೆ ಮಹಾ ಸಂತೋಷವನ್ನುಂಟು ಮಾಡುವ ಒಳ್ಳೇಸಮಾಚಾರ ವನ್ನು ನಾನು ನಿಮಗೆ ತಿಳಿಯಪಡಿಸುತ್ತೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ