ಆದಿಕಾಂಡ 1:30

ಇದಲ್ಲದೆ ನಾನು ಭೂಮಿಯ ಪ್ರತಿ ಯೊಂದು ಮೃಗಕ್ಕೂ ಆಕಾಶದ ಪ್ರತಿಯೊಂದು ಪಕ್ಷಿಗೂ ಭೂಮಿಯ ಮೇಲೆ ಹರಿದಾಡುವ ಜೀವವುಳ್ಳ ಪ್ರತಿ ಯೊಂದಕ್ಕೂ ಹಸುರಾದ ಪ್ರತಿಯೊಂದು ಪಲ್ಯವನ್ನು ಆಹಾರಕ್ಕಾಗಿ ಕೊಟ್ಟಿದ್ದೇನೆ ಅಂದನು; ಅದು ಹಾಗೆಯೇ ಆಯಿತು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 1

28ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿದನು. ದೇವರು--ಅಭಿವೃದ್ಧಿಯಾಗಿ ಹೆಚ್ಚಿ ಭೂಮಿಯನ್ನು ತುಂಬಿಕೊಂಡು ಅದನ್ನು ವಶಮಾಡಿ ಕೊಳ್ಳಿರಿ; ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯ ಮೇಲೆ ಚಲಿಸುವ ಪ್ರತಿಯೊಂದು ಜೀವಿಯ ಮೇಲೆಯೂ ದೊರೆತನಮಾಡಿರಿ ಎಂದು ಅವರಿಗೆ ಹೇಳಿದನು.

29ದೇವರು--ಇಗೋ, ಸಮಸ್ತ ಭೂಮಿಯ ಮೇಲೆ ಇರುವ ಬೀಜವುಳ್ಳ ಪ್ರತಿಯೊಂದು ಪಲ್ಯವನ್ನೂ ಬೀಜಬಿಡುವ ಪ್ರತಿಯೊಂದು ಹಣ್ಣಿನ ಮರವನ್ನೂ ನಿಮಗೆ ಕೊಟ್ಟಿದ್ದೇನೆ. ಅದು ನಿಮಗೆ ಆಹಾರಕ್ಕಾಗಿ ರುವದು.

30ಇದಲ್ಲದೆ ನಾನು ಭೂಮಿಯ ಪ್ರತಿ ಯೊಂದು ಮೃಗಕ್ಕೂ ಆಕಾಶದ ಪ್ರತಿಯೊಂದು ಪಕ್ಷಿಗೂ ಭೂಮಿಯ ಮೇಲೆ ಹರಿದಾಡುವ ಜೀವವುಳ್ಳ ಪ್ರತಿ ಯೊಂದಕ್ಕೂ ಹಸುರಾದ ಪ್ರತಿಯೊಂದು ಪಲ್ಯವನ್ನು ಆಹಾರಕ್ಕಾಗಿ ಕೊಟ್ಟಿದ್ದೇನೆ ಅಂದನು; ಅದು ಹಾಗೆಯೇ ಆಯಿತು.

31ದೇವರು ತಾನು ಮಾಡಿದ್ದನ್ನೆಲ್ಲಾ ನೋಡಲಾಗಿ ಇಗೋ, ಅದು ಬಹಳ ಒಳ್ಳೆಯದಾಗಿತ್ತು. ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಆರನೆಯ ದಿನವಾಯಿತು.

ಆದಿಕಾಂಡ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी