ಯೆಶಾಯ 33:20

ನಮ್ಮ ಹಬ್ಬಗಳು ನಡೆಯುವ ಚೀಯೋನ್‌ ಪಟ್ಟಣವನ್ನು ದೃಷ್ಟಿಸಿರಿ, ಯೆರೂಸಲೇಮ್‌ ನೆಮ್ಮದಿಯ ನಿವಾಸವಾಗಿಯೂ ಗೂಟಕೀಳದ, ಹಗ್ಗ ಹರಿಯದ, ಒಂದೇ ಕಡೆ ಇರುವ ಗುಡಾರವಾಗಿಯೂ ಇರುವದನ್ನು ನೀವು ಕಣ್ಣಾರೆ ಕಾಣುವಿರಿ.

ಸಂದರ್ಭದೊಂದಿಗೆ ಓದಿ · ಯೆಶಾಯ 33

18ಆಗ ಭಯವನ್ನು ಮನಸ್ಸಿಗೆ ತಂದುಕೊಳ್ಳುತ್ತಾ ಬರೆಯು ವವನು ಎಲ್ಲಿ? ಅಂಗೀಕರಿಸುವವನು ಎಲ್ಲಿ? ಬುರುಜು ಗಳನ್ನು (ಗೋಪುರಗಳನ್ನು) ಲೆಕ್ಕಮಾಡಿದವನು ಎಲ್ಲಿ ಎಂದು ಅಂದುಕೊಳ್ಳುವಿರಿ.

19ನೀನು ಕೇಳಕೂಡದ ಹಾಗೆ ಕಠಿಣವಾದ ಭಾಷೆಯೂ ತಿಳಿಯಕೂಡದ ಹಾಗೆ ಅಪರೂಪವಾದ ಮಾತೂ ಆಡಿದ ಜನರನ್ನು ನೀನು ನೋಡದೆ ಇರುವಿ.

20ನಮ್ಮ ಹಬ್ಬಗಳು ನಡೆಯುವ ಚೀಯೋನ್‌ ಪಟ್ಟಣವನ್ನು ದೃಷ್ಟಿಸಿರಿ, ಯೆರೂಸಲೇಮ್‌ ನೆಮ್ಮದಿಯ ನಿವಾಸವಾಗಿಯೂ ಗೂಟಕೀಳದ, ಹಗ್ಗ ಹರಿಯದ, ಒಂದೇ ಕಡೆ ಇರುವ ಗುಡಾರವಾಗಿಯೂ ಇರುವದನ್ನು ನೀವು ಕಣ್ಣಾರೆ ಕಾಣುವಿರಿ.

21ಆದರೆ ಅಲ್ಲಿ ವಿಸ್ತಾರವಾದ ನದಿಗಳಂತೆ ಮತ್ತು ಪ್ರವಾಹಗ ಳಂತೆ ಮಹಿಮೆಯುಳ್ಳ ಕರ್ತನು ನಮಗೆ ಇರುವನು. ಅಲ್ಲಿ ಹುಟ್ಟುಗೋಲಿನ ದೋಣಿ ಹೋಗದು, ಘನ ನಾವೆಯು ಸಂಚರಿಸದು.

22ಕರ್ತನು ನಮ್ಮ ನ್ಯಾಯಾ ಧಿಪತಿಯಾಗಿದ್ದಾನೆ, ಕರ್ತನು ನಮಗೆ ಆಜ್ಞೆ ಕೊಡು ವಾತನು, ಕರ್ತನೇ ನಮ್ಮ ರಾಜನು; ಆತನೇ ನಮ್ಮನ್ನು ರಕ್ಷಿಸುವನು.

ಯೆಶಾಯ 33 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी