೨ ಕೊರಿಂಥದವರಿಗೆ 12:8

ಈ ವಿಷಯದಲ್ಲಿ ಅದು ನನ್ನನ್ನು ಬಿಟ್ಟುಹೋಗಬೇಕೆಂದು ಮೂರು ಸಾರಿ ಕರ್ತನನ್ನು ಬೇಡಿಕೊಂಡೆನು.

ಸಂದರ್ಭದೊಂದಿಗೆ ಓದಿ · ೨ ಕೊರಿಂಥದವರಿಗೆ 12

6ಹೊಗಳಿಕೊಳ್ಳುವದಕ್ಕೆ ನನಗೆ ಮನಸ್ಸಿ ದ್ದರೂ ನಾನು ಬುದ್ದಿಹೀನನಾಗುವದಿಲ್ಲ. ಯಾಕಂದರೆ ಸತ್ಯವನ್ನೇ ಹೇಳುತ್ತಿರುವೆನು. ಆದರೂ ಯಾವನೂ ನನ್ನಲ್ಲಿ ಕಾಣುವದಕ್ಕಿಂತಲೂ ನನ್ನಿಂದ ಕೇಳುವದ ಕ್ಕಿಂತಲೂ ಹೆಚ್ಚಾಗಿ ನನ್ನನ್ನು ಕುರಿತು ಎಣಿಸದಂತೆ ನಾನು ಮೌನವಾಗಿರುವೆನು;

7ಇದಲ್ಲದೆ ಹೇರಳವಾದ ಪ್ರಕಟಣೆಗಳ ಮೂಲಕ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಬಾರದೆಂದು ನನ್ನನ್ನು ಗುದ್ದುವದಕ್ಕಾಗಿ ಸೈತಾನನ ದೂತನಂತೆ ನನ್ನ ಶರೀರದಲ್ಲಿ ಒಂದು ಮುಳ್ಳು ನನಗೆ ಕೊಡಲ್ಪಟ್ಟಿದೆ; ಹೀಗೆ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಲಾರದಂತೆ ಇದಾಯಿತು.

8ಈ ವಿಷಯದಲ್ಲಿ ಅದು ನನ್ನನ್ನು ಬಿಟ್ಟುಹೋಗಬೇಕೆಂದು ಮೂರು ಸಾರಿ ಕರ್ತನನ್ನು ಬೇಡಿಕೊಂಡೆನು.

9ಅದಕ್ಕಾತನು--ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ನನ್ನ ಬಲವು ಪರಿಪೂರ್ಣವಾಗುತ್ತದೆ ಎಂದು ನನಗೆ ಹೇಳಿದನು. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿ ಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾ ವಸ್ಥೆಗಳ ವಿಷಯದಲ್ಲಿಯೇ ಬಹು ಸಂತೋಷವಾಗಿ ಹೆಚ್ಚಳಪಡುವೆನು.

10ಆದದರಿಂದ ನಾನು ಕ್ರಿಸ್ತನ ನಿಮಿತ್ತ ನಿರ್ಬಲಾವಸ್ಥೆಗಳಲ್ಲಿ ಅವಮಾನಗಳಲ್ಲಿ ಕೊರತೆ ಗಳಲ್ಲಿ ಹಿಂಸೆಗಳಲ್ಲಿ ಇಕ್ಕಟ್ಟುಗಳಲ್ಲಿ ಸಂತೋಷವಾಗಿ ದ್ದೇನೆ; ಯಾಕಂದರೆ ನಾನು ಯಾವಾಗ ನಿರ್ಬಲ ನಾಗಿದ್ದೇನೋ ಅವಾಗಲೇ ಬಲವುಳ್ಳವನಾಗಿದ್ದೇನೆ.

೨ ಕೊರಿಂಥದವರಿಗೆ 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी