ವಿಮೋಚನಕಾಂಡ 8:22

ಆದರೆ ಆ ದಿವಸದಲ್ಲಿ ನಾನೇ ಭೂಲೋಕದಲ್ಲಿ ಕರ್ತನೆಂದು ನೀನು ತಿಳಿದುಕೊಳ್ಳುವಂತೆ ನನ್ನ ಜನರು ವಾಸಿಸುವ ಗೋಷೆನ್‌ ಸೀಮೆಯಲ್ಲಿ ನೊಣಗಳು ಇರದ ಹಾಗೆ ಅದನ್ನು ನಾನು ಪ್ರತ್ಯೇಕಿಸುವೆನು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 8

20ಆಗ ಕರ್ತನು ಮೋಶೆಗೆ--ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೋ. ಇಗೋ, ಅವನು ಹೊರಗೆ ನೀರಿನ ಬಳಿಗೆ ಬರುತ್ತಾನೆ. ನೀನು ಅವನಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳು ತ್ತಾನೆ--ನನ್ನ ಜನರು ನನ್ನನ್ನು ಸೇವಿಸುವ ಹಾಗೆ ಅವರನ್ನು ಕಳುಹಿಸು.

21ನೀನು ನನ್ನ ಜನರನ್ನು ಕಳುಹಿಸದೆ ಹೋದರೆ ಇಗೋ, ನಾನು ನಿನ್ನ ಮೇಲೆಯೂ ನಿನ್ನ ಸೇವಕರ ಮೇಲೆಯೂ ನಿನ್ನ ಜನರ ಮೇಲೆಯೂ ನಿನ್ನ ಮನೆಗಳಲ್ಲಿಯೂ ನೊಣಗಳನ್ನು ಕಳುಹಿಸುವೆನು. ಐಗುಪ್ತ್ಯರ ಮನೆಗಳೂ ಅವರು ವಾಸವಾಗಿರುವ ಭೂಮಿಯೂ ನೊಣಗಳಿಂದ ತುಂಬಿರುವವು.

22ಆದರೆ ಆ ದಿವಸದಲ್ಲಿ ನಾನೇ ಭೂಲೋಕದಲ್ಲಿ ಕರ್ತನೆಂದು ನೀನು ತಿಳಿದುಕೊಳ್ಳುವಂತೆ ನನ್ನ ಜನರು ವಾಸಿಸುವ ಗೋಷೆನ್‌ ಸೀಮೆಯಲ್ಲಿ ನೊಣಗಳು ಇರದ ಹಾಗೆ ಅದನ್ನು ನಾನು ಪ್ರತ್ಯೇಕಿಸುವೆನು.

23ನನ್ನ ಜನರನ್ನೂ ನಿನ್ನ ಜನರನ್ನೂ ವಿಂಗಡಿಸುವೆನು. ನಾಳೆ ಈ ಗುರುತು ಇರುವದು ಎಂದು ಹೇಳು ಅಂದನು.

24ಕರ್ತನು ಹಾಗೆಯೇ ಮಾಡಿದನು; ಬಾಧಿಸುವ ನೊಣಗಳು ಫರೋಹನ ಮನೆಯಲ್ಲಿಯೂ ಅವನ ಸೇವಕರ ಮನೆಗಳಲ್ಲಿಯೂ ಸಮಸ್ತ ಐಗುಪ್ತದೇಶ ದಲ್ಲಿಯೂ ತುಂಬಿಕೊಂಡವು; ಅವುಗಳಿಂದ ದೇಶವು ಕೆಟ್ಟುಹೋಯಿತು.

ವಿಮೋಚನಕಾಂಡ 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी