ಯೆರೆಮಿಯ 50:30

ಆದದರಿಂದ ಅದರ ಯೌವನಸ್ಥರು ಬೀದಿಗಳಲ್ಲಿ ಬೀಳುವರು; ಅದರ ಯುದ್ಧಸ್ಥರೆಲ್ಲರು ಆ ದಿವಸದಲ್ಲಿ ತೆಗೆದುಹಾಕಲ್ಪಡು ವರೆಂದು ಕರ್ತನು ಅನ್ನುತ್ತಾನೆ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 50

28ಅವರು ಚೀಯೋನಿನಲ್ಲಿ ನಮ್ಮ ದೇವರಾದ ಕರ್ತನ ಪ್ರತಿದಂಡನೆಯನ್ನೂ ಆತನ ಆಲಯದ ಪ್ರತಿ ದಂಡನೆ ಯನ್ನೂ ತಿಳಿಸುತ್ತಾ, ಬಾಬೆಲಿನ ದೇಶದಿಂದ ತಪ್ಪಿಸಿ ಕೊಂಡು ಓಡಿ ಹೋಗುವವರ ಸ್ವರವು!

29ಬಾಬೆಲಿಗೆ ವಿರೋಧವಾಗಿ ಬಿಲ್ಲಿನವರನ್ನು ಒಟ್ಟಾಗಿ ಕರೆಯಿರಿ; ಬಿಲ್ಲು ಬೊಗ್ಗಿಸುವವರೆಲ್ಲರೇ, ಅದಕ್ಕೆ ವಿರೋಧವಾಗಿ ಸುತ್ತಲು ದಂಡು ಕಟ್ಟಿರಿ; ಅದರಲ್ಲಿ ಯಾವದು ತಪ್ಪಿಸಿ ಕೊಳ್ಳಲಾರದೆ ಇರಲಿ. ಅದರ ಕೃತ್ಯಗಳ ಪ್ರಕಾರ ಅದಕ್ಕೆ ಪ್ರತಿಫಲ ಕೊಡಿರಿ; ಅದು ಮಾಡಿದ್ದೆಲ್ಲಾದರ ಹಾಗೆ ಅದಕ್ಕೆ ಮಾಡಿರಿ; ಕರ್ತನಿಗೆ ವಿರೋಧವಾಗಿಯೂ ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾಗಿಯೂ ಅದು ಗರ್ವ ತೋರಿಸಿತು.

30ಆದದರಿಂದ ಅದರ ಯೌವನಸ್ಥರು ಬೀದಿಗಳಲ್ಲಿ ಬೀಳುವರು; ಅದರ ಯುದ್ಧಸ್ಥರೆಲ್ಲರು ಆ ದಿವಸದಲ್ಲಿ ತೆಗೆದುಹಾಕಲ್ಪಡು ವರೆಂದು ಕರ್ತನು ಅನ್ನುತ್ತಾನೆ.

31ಅತಿ ಗರ್ವಿಷ್ಠನೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ; ನಿನ್ನ ದಿವಸವೂ ನಿನ್ನ ವಿಚಾರಣೆಯ ಕಾಲವೂ ಬಂತು.

32ಆಗ ಅತಿ ಗರ್ವದ (ರಾಜ್ಯವು) ಎಡವಿ ಬೀಳುವದು; ಅದನ್ನು ಎಬ್ಬಿಸುವದಕ್ಕೆ ಯಾರೂ ಇರುವದಿಲ್ಲ; ಅದರ ಪಟ್ಟಣಗಳಲ್ಲಿ ನಾನು ಬೆಂಕಿ ಹಚ್ಚುವೆನು, ಅದು ಅದರ ಸುತ್ತಲಿರುವದನ್ನೆಲ್ಲಾ ನುಂಗಿಬಿಡುವದು.

ಯೆರೆಮಿಯ 50 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी