ಆದಿಕಾಂಡ 33:15

ಅದಕ್ಕೆ ಏಸಾವನು--ನನ್ನ ಬಳಿಯಲ್ಲಿರುವ ಜನರಲ್ಲಿ ಕೆಲವರನ್ನು ನಿನ್ನ ಬಳಿಯಲ್ಲಿ ಬಿಟ್ಟು ಹೋಗುತ್ತೇನೆ ಅನ್ನಲು ಯಾಕೋಬನು--ಅದರ ಅಗತ್ಯವೇನು? ನನ್ನ ಒಡೆಯನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಲಿ ಅಂದನು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 33

13ಅದಕ್ಕೆ ಯಾಕೋಬನು ಅವನಿಗೆ--ಮಕ್ಕಳು ಎಳೇ ಪ್ರಾಯದವರಾಗಿದ್ದಾರೆ. ಇದಲ್ಲದೆ ಎಳೇ ದನಕುರಿಗಳು ನನ್ನ ಬಳಿಯಲ್ಲಿರುವದು ನನ್ನ ಒಡೆಯನಿಗೆ ತಿಳಿದದೆ; ಒಂದು ದಿನ ಹೆಚ್ಚಾಗಿ ಅವುಗಳನ್ನು ನಡಿಸಿದರೆ ಎಲ್ಲಾ ಮಂದೆಯು ಸತ್ತುಹೋದಾವು.

14ಆದದರಿಂದ ನನ್ನ ಒಡೆಯನೇ, ನಿನ್ನ ಸೇವಕನಿಗಿಂತಲೂ ಮುಂಚೆ ಹೋಗಬಹುದು. ನಾನು ನನ್ನ ಒಡೆಯನ ಬಳಿಗೆ ಸೇಯಾರಿಗೆ ಬರುವ ವರೆಗೆ ನನ್ನ ಮುಂದಿರುವ ಮಂದೆಗಳ ನಡಿಗೆಗೂ ಮಕ್ಕಳ ನಡಿಗೆಗೂ ತಕ್ಕ ಹಾಗೆ ಮೆಲ್ಲಗೆ ನಡೆದು ಬರುವೆನು ಅಂದನು.

15ಅದಕ್ಕೆ ಏಸಾವನು--ನನ್ನ ಬಳಿಯಲ್ಲಿರುವ ಜನರಲ್ಲಿ ಕೆಲವರನ್ನು ನಿನ್ನ ಬಳಿಯಲ್ಲಿ ಬಿಟ್ಟು ಹೋಗುತ್ತೇನೆ ಅನ್ನಲು ಯಾಕೋಬನು--ಅದರ ಅಗತ್ಯವೇನು? ನನ್ನ ಒಡೆಯನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಲಿ ಅಂದನು.

16ಹೀಗೆ ಏಸಾವನು ಆ ದಿನವೇ ತನ್ನ ಮಾರ್ಗವಾಗಿ ಸೇಯಾರಿಗೆ ಹಿಂದಿರುಗಿ ಹೋದನು.

17ಯಾಕೋ ಬನು ಪ್ರಯಾಣಮಾಡಿ ಸುಕ್ಕೋತಿಗೆ ಹೋಗಿ ಮನೆಯನ್ನು ಕಟ್ಟಿಸಿಕೊಂಡನು; ಇದಲ್ಲದೆ ತನ್ನ ಮಂದೆಗಳಿಗೆ ಹಟ್ಟಿಗಳನ್ನು ಮಾಡಿಸಿದನು. ಆದದರಿಂದ ಆ ಸ್ಥಳಕ್ಕೆ ಸುಕ್ಕೋತ್‌ ಎಂದು ಹೆಸರಾಯಿತು.

ಆದಿಕಾಂಡ 33 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी