ಆತನಿಗೆ--ನೀನು ಯೆಹೂದ್ಯರ ಅರಸನಾಗಿದ್ದರೆ ನಿನ್ನನ್ನು ನೀನೇ ರಕ್ಷಿಸಿಕೋ ಅಂದರು.
35ಜನರು ನೋಡುತ್ತಾ ನಿಂತುಕೊಂಡಿ ದ್ದರು. ಆಗ ಅವರೊಂದಿಗೆ ಅಧಿಕಾರಿಗಳು ಸಹ ಆತ ನಿಗೆ ಅಪಹಾಸ್ಯ ಮಾಡಿ--ಈತನು ಬೇರೆಯವರನ್ನು ರಕ್ಷಿಸಿದನು; ಇವನು ದೇವರು ಆರಿಸಿಕೊಂಡ ಕ್ರಿಸ್ತನಾಗಿ ದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ ಅಂದರು.
36ಸೈನಿ ಕರು ಸಹ ಆತನ ಬಳಿಗೆ ಬಂದು ಆತನಿಗೆ ಹಾಸ್ಯ ಮಾಡಿ ಹುಳಿರಸವನ್ನು ಕೊಟ್ಟು
37ಆತನಿಗೆ--ನೀನು ಯೆಹೂದ್ಯರ ಅರಸನಾಗಿದ್ದರೆ ನಿನ್ನನ್ನು ನೀನೇ ರಕ್ಷಿಸಿಕೋ ಅಂದರು.
38ಇದಲ್ಲದೆ ಆತನ ಮೇಲ್ಗಡೆಯಲ್ಲಿ--ಈತನು ಯೆಹೂದ್ಯರ ಅರಸನು ಎಂಬ ಮೇಲ್ಬರಹವು ಸಹ ಗ್ರೀಕ್ ಲ್ಯಾಟಿನ್ ಮತ್ತು ಇಬ್ರಿಯ ಅಕ್ಷರಗಳಲ್ಲಿ ಬರೆಯಲ್ಪಟ್ಟಿತ್ತು.
39ತೂಗುಹಾಕಲ್ಪಟ್ಟಿದ್ದ ದುಷ್ಕರ್ಮಿಗಳಲ್ಲಿ ಒಬ್ಬನು ಆತನನ್ನು ದೂಷಿಸಿ--ನೀನು ಕ್ರಿಸ್ತನಾಗಿದ್ದರೆ ನಿನ್ನನ್ನು ರಕ್ಷಿಸಿಕೊಂಡು ನಮ್ಮನ್ನೂ ರಕ್ಷಿಸು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ