ಕರ್ತನು ದೂರದಿಂದ ಅಂದರೆ ಭೂಮಿಯ ಅಂತ್ಯದಿಂದ ಹಾರುವ ಹದ್ದಿಗೆ ಸಮಾನವಾದ ಜನಾಂಗ ವನ್ನೂ ನಿನಗೆ ತಿಳಿಯದ ಭಾಷೆಯ ಜನಾಂಗವನ್ನೂ
47ನೀನು ಎಲ್ಲವುಗಳ ಸಮೃದ್ಧಿಯಲ್ಲಿ ನಿನ್ನ ದೇವರಾದ ಕರ್ತನಿಗೆ ಸಂತೋಷದಿಂದಲೂ ಮನಸ್ಸಿನ ಸೌಖ್ಯ ದಿಂದಲೂ ಸೇವಿಸದೆ ಇದದ್ದರಿಂದ
48ಹಸಿವೆಯಲ್ಲಿ, ದಾಹದಲ್ಲಿ, ಬೆತ್ತಲೆಯಲ್ಲಿ, ಎಲ್ಲವುಗಳ ಕೊರತೆಯಲ್ಲಿ ದೇವರು ನಿನ್ನ ಮೇಲೆ ಕಳುಹಿಸುವ ನಿನ್ನ ಶತ್ರುಗಳನ್ನು ಸೇವಿಸಬೇಕು; ಆತನು ನಿನ್ನನ್ನು ನಾಶಮಾಡುವ ವರೆಗೆ ಕಬ್ಬಿಣದ ನೊಗವನ್ನು ನಿನ್ನ ಕುತ್ತಿಗೆಯ ಮೇಲೆ ಹೊರಿ ಸುವನು.
49ಕರ್ತನು ದೂರದಿಂದ ಅಂದರೆ ಭೂಮಿಯ ಅಂತ್ಯದಿಂದ ಹಾರುವ ಹದ್ದಿಗೆ ಸಮಾನವಾದ ಜನಾಂಗ ವನ್ನೂ ನಿನಗೆ ತಿಳಿಯದ ಭಾಷೆಯ ಜನಾಂಗವನ್ನೂ
50ಮುದುಕರ ಮುಖದಾಕ್ಷಿಣ್ಯ ನೋಡದೆಯೂ ಚಿಕ್ಕವ ರಿಗೆ ದಯೆತೋರಿಸದೆ ಇರುವಂಥ ಕಠಿಣ ಮುಖವುಳ್ಳ ಜನಾಂಗವನ್ನೂ ನಿನ್ನ ಮೇಲೆ ಬರಮಾಡುವನು.
51ಅದು ನಿನ್ನ ಪಶುಗಳ ಫಲವನ್ನೂ ನಿನ್ನ ಭೂಮಿಯ ಫಲವನ್ನೂ ನೀನು ನಾಶವಾಗುವ ವರೆಗೆ ತಿಂದು ಬಿಡುವದು; ಅದು ನಿನ್ನನ್ನು ಕೆಡಿಸುವ ವರೆಗೆ ಧಾನ್ಯ ದ್ರಾಕ್ಷಾರಸ ಎಣ್ಣೆಗಳನ್ನೂ ಪಶುಗಳ ಅಭಿವೃದ್ಧಿಯನ್ನೂ ಕುರಿಗಳ ಮಂದೆಗಳನ್ನೂ ನಿನಗೆ ಉಳಿಸದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ