ಅಪೊಸ್ತಲರ ಕೃತ್ಯಗಳು 11:7

ಆಗ--ಪೇತ್ರನೇ, ಎದ್ದು ಕೊಂದು ತಿನ್ನು ಎಂದು ನನಗೆ ಹೇಳುವ ಧ್ವನಿಯನ್ನು ಕೇಳಿದೆನು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 11

5ನಾನು ಯೊಪ್ಪ ಪಟ್ಟಣದಲ್ಲಿ ಪ್ರಾರ್ಥನೆ ಮಾಡುತ್ತಿ ದ್ದಾಗ ಪರವಶನಾಗಿದ್ದ ನನಗೆ ಒಂದು ದರ್ಶನ ವಾಯಿತು; ಅದೇನಂದರೆ, ಆಕಾಶದಿಂದ ನಾಲ್ಕು ಮೂಲೆಗಳಿಂದ ದೊಡ್ಡ ಜೋಳಿಗೆಯಂತಿರುವ ಒಂದು ಪಾತ್ರೆಯು ಇಳಿಸಲ್ಪಟ್ಟು ನನ್ನ ಬಳಿಗೆ ಬಂತು.

6ಅದೇನೆಂದು ತಿಳುಕೊಳ್ಳುವದಕ್ಕೆ ನಾನು ಚೆನ್ನಾಗಿ ನೊಡಿದಾಗ ಭೂಮಿಯ ಮೇಲಿರುವ ನಾಲ್ಕು ಕಾಲು ಗಳುಳ್ಳ ಪಶುಗಳನ್ನೂ ಕಾಡು ಮೃಗಗಳನ್ನೂ ಹರಿ ದಾಡುವ ಕ್ರಿಮಿಕೀಟಗಳನ್ನೂ ಆಕಾಶದ ಪಕ್ಷಿಗಳನ್ನೂ ಕಂಡೆನು.

7ಆಗ--ಪೇತ್ರನೇ, ಎದ್ದು ಕೊಂದು ತಿನ್ನು ಎಂದು ನನಗೆ ಹೇಳುವ ಧ್ವನಿಯನ್ನು ಕೇಳಿದೆನು.

8ಆದರೆ ನಾನು--ಕರ್ತನೇ, ಹಾಗಲ್ಲ; ಹೊಲೆಯಾದ ದ್ದಾಗಲೀ ಅಶುದ್ಧವಾದದ್ದಾಗಲೀ ಯಾವದೂ ಯಾವ ಸಮಯದಲ್ಲೂ ನನ್ನ ಬಾಯೊಳಗೆ ಸೇರಲಿಲ್ಲ ಎಂದು ಹೇಳಿದೆನು;

9ಅದಕ್ಕೆ--ದೇವರು ಶುದ್ಧ ಮಾಡಿದ್ದನ್ನು ನೀನು ಹೊಲೆಯೆನ್ನಬಾರದು ಎಂಬದಾಗಿ ತಿರಿಗಿ ಆಕಾಶದಿಂದ ಧ್ವನಿಯು ನನಗೆ ಉತ್ತರಕೊಟ್ಟಿತು.

ಅಪೊಸ್ತಲರ ಕೃತ್ಯಗಳು 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी