ಹೀಗಿದ್ದರೆ ನೀವು ಹೊರಗಿನವರ ಎದುರಿ ನಲ್ಲಿ ಪ್ರಾಮಾಣಿಕರಾಗಿ ನಡೆದುಕೊಳ್ಳುವಿರಿ. ನಿಮಗೆ ಯಾವದಕ್ಕೂ ಕೊರತೆಯಿರುವದಿಲ್ಲ.
10ಸಮಸ್ತ ಮಕೆದೋನ್ಯ ದಲ್ಲಿರುವ ಸಹೋದರರನ್ನೆಲ್ಲಾ ಪ್ರೀತಿಸುವವರಾಗಿಯೇ ಇದ್ದೀರಿ; ಆದರೂ ಸಹೋದರರೇ, ನೀವು ಪ್ರೀತಿಯಲ್ಲಿ ಇನ್ನೂ ಹೆಚ್ಚುತ್ತಾ ಬರಬೇಕೆಂದು ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.
11ಇದಲ್ಲದೆ ನಾವು ನಿಮಗೆ ಆಜ್ಞೆ ಕೊಟ್ಟ ಪ್ರಕಾರ ನೀವು ಸುಮ್ಮನಿದ್ದು ಸ್ವಂತಕಾರ್ಯವನ್ನೇ ನಡಿಸಿಕೊಂಡು ಕೈಯಾರೆ ಕೆಲಸಮಾಡುವದನ್ನು ಕಲಿಯಿರಿ.
12ಹೀಗಿದ್ದರೆ ನೀವು ಹೊರಗಿನವರ ಎದುರಿ ನಲ್ಲಿ ಪ್ರಾಮಾಣಿಕರಾಗಿ ನಡೆದುಕೊಳ್ಳುವಿರಿ. ನಿಮಗೆ ಯಾವದಕ್ಕೂ ಕೊರತೆಯಿರುವದಿಲ್ಲ.
13ಇದಲ್ಲದೆ ಸಹೋದರರೇ, ನಿರೀಕ್ಷೆಯಿಲ್ಲದ ಬೇರೆಯವರ ಹಾಗೆ ದುಃಖಿಸಿದಂತೆ ನಿದ್ರೆಹೋದವರ ವಿಷಯದಲ್ಲಿ ನೀವು ತಿಳಿದಿರಬೇಕೆಂದು ನಾನು ಇಚ್ಚಿಸುತ್ತೇನೆ.
14ಯೇಸು ಸತ್ತು ತಿರಿಗಿ ಎದ್ದನೆಂದು ನಾವು ನಂಬಿದ ಮೇಲೆ ಅದರಂತೆ ಯೇಸುವಿನ ಲ್ಲಿದ್ದುಕೊಂಡು ನಿದ್ರೆಹೋಗುವವರನ್ನು ಸಹ ದೇವರು ಆತನೊಡನೆ ಕರೆದುಕೊಂಡು ಬರುವನೆಂದು ನಂಬ ಬೇಕಲ್ಲವೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ