ಅವರು ಭಯದಿಂದಲೂ ಮಹಾ ಸಂತೋಷದಿಂದಲೂ ಸಮಾಧಿಯಿಂದ ಬೇಗನೆ ಹೊರಟು ಆತನ ಶಿಷ್ಯರಿಗೆ ತಿಳಿಸುವದಕ್ಕಾಗಿ ಓಡಿಹೋದರು.
6ಆತನು ಇಲ್ಲಿ ಇಲ್ಲ; ಯಾಕಂದರೆ ಆತನು ಹೇಳಿರುವ ಪ್ರಕಾರ ಆತನು ಎದ್ದಿದ್ದಾನೆ; ಕರ್ತನು ಮಲಗಿದ್ದ ಸ್ಥಳವನ್ನು ಬಂದು ನೋಡಿರಿ.
7ಬೇಗನೆ ಹೋಗಿ ಆತನು ಸತ್ತವರೊಳಗಿಂದ ಎದ್ದಿದ್ದಾನೆ ಎಂದು ಆತನ ಶಿಷ್ಯರಿಗೆ ಹೇಳಿರಿ; ಮತ್ತು ಇಗೋ, ನಿಮಗೆ ಮುಂದಾಗಿ ಆತನು ಗಲಿಲಾಯಕ್ಕೆ ಹೋಗುತ್ತಾನೆ. ನೀವು ಆತನನ್ನು ಅಲ್ಲಿ ಕಾಣುವಿರಿ; ಇಗೋ, ನಾನು ನಿಮಗೆ ಹೇಳಿದ್ದೇನೆ ಅಂದನು.
8ಅವರು ಭಯದಿಂದಲೂ ಮಹಾ ಸಂತೋಷದಿಂದಲೂ ಸಮಾಧಿಯಿಂದ ಬೇಗನೆ ಹೊರಟು ಆತನ ಶಿಷ್ಯರಿಗೆ ತಿಳಿಸುವದಕ್ಕಾಗಿ ಓಡಿಹೋದರು.
9ಅವರು ಆತನ ಶಿಷ್ಯರಿಗೆ ತಿಳಿಸು ವದಕ್ಕೆ ಹೋಗುತ್ತಿದ್ದಾಗ ಇಗೋ, ಯೇಸು ಅವರನ್ನು ಸಂಧಿಸಿ--ಶುಭವಾಗಲಿ ಅಂದನು. ಆಗ ಅವರು ಬಂದು ಆತನ ಪಾದಗಳನ್ನು ಹಿಡಿದು ಆತನನ್ನು ಆರಾಧಿಸಿದರು.
10ಆಗ ಯೇಸು ಅವರಿಗೆ-- ಭಯ ಪಡಬೇಡಿರಿ; ನನ್ನ ಸಹೋದರರು ಗಲಿಲಾಯಕ್ಕೆ ಹೋಗಬೇಕೆಂದೂ ಅಲ್ಲಿ ಅವರು ನನ್ನನ್ನು ಕಾಣುವ ರೆಂದೂ ಹೋಗಿ ಅವರಿಗೆ ಹೇಳಿರಿ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ