೧ ಸಮುವೇಲನು 31:6

ಹೀಗೆ ಆ ದಿನ ಸೌಲನೂ ಅವನ ಮೂವರು ಮಕ್ಕಳೂ ಅವನ ಆಯುಧ ಹಿಡಿಯುವವನೂ ಎಲ್ಲಾ ಜನರೂ ಸತ್ತರು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 31

4ಆದಕಾರಣ ಅವನು ತನ್ನ ಆಯುಧ ಹಿಡಿಯುವವನಿಗೆ--ಈ ಸುನ್ನತಿ ಇಲ್ಲದವರು ಬಂದು ನನ್ನನ್ನು ತಿವಿದುಬಿಟ್ಟು ಅವಮಾನ ಮಾಡದ ಹಾಗೆ ನೀನು ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ಅದರಿಂದ ತಿವಿ ಅಂದನು. ಆದರೆ ಅವನ ಆಯುಧ ಹಿಡಿಯು ವವನು ಬಹು ಭಯಪಟ್ಟದ್ದರಿಂದ ಹಾಗೆ ಮಾಡ ಲೊಲ್ಲದೆ ಹೋದನು. ಆಗ ಸೌಲನು ತಾನೇ ಕತ್ತಿ ಯನ್ನು ತಕ್ಕೊಂಡು ಅದರ ಮೇಲೆ ಬಿದ್ದನು.

5ಸೌಲನು ಸತ್ತು ಹೋದದ್ದನ್ನು ಅವನ ಆಯುಧ ಹಿಡಿಯುವವನು ನೋಡಿದಾಗ ಅವನೂ ಹಾಗೆಯೇ ತನ್ನ ಕತ್ತಿಯ ಮೇಲೆ ಬಿದ್ದು ಅವನ ಸಂಗಡ ಸತ್ತನು.

6ಹೀಗೆ ಆ ದಿನ ಸೌಲನೂ ಅವನ ಮೂವರು ಮಕ್ಕಳೂ ಅವನ ಆಯುಧ ಹಿಡಿಯುವವನೂ ಎಲ್ಲಾ ಜನರೂ ಸತ್ತರು.

7ಇಸ್ರಾಯೇಲ್‌ ಜನರು ಓಡಿಹೋದರೆಂದೂ ಸೌಲನೂ ಅವನ ಮಕ್ಕಳೂ ಸತ್ತರೆಂದೂ ತಗ್ಗಿಗೂ ಯೊರ್ದನಿಗೂ ಆಚೆಯಲ್ಲಿದ್ದ ಇಸ್ರಾಯೇಲ್‌ ಜನರು ಕಂಡಾಗ ಅವರು ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿ ಹೋದರು. ಆಗ ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸವಾಗಿದ್ದರು.

8ಮಾರನೇ ದಿವಸದಲ್ಲಿ ಫಿಲಿಷ್ಟಿಯರು ಕೊಲ್ಲಲ್ಪಟ್ಟವ ರನ್ನು ಸುಲುಕೊಳ್ಳಲು ಬಂದಾಗ ಗಿಲ್ಬೋವ ಬೆಟ್ಟದಲ್ಲಿ ಬಿದ್ದಿರುವ ಸೌಲನನ್ನೂ ಅವನ ಮೂವರು ಮಕ್ಕಳನ್ನೂ ಕಂಡುಕೊಂಡು

೧ ಸಮುವೇಲನು 31 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी