ಇಬ್ರಿಯರಿಗೆ 6:6

ಅವರಲ್ಲಿ ತಿರಿಗಿ ಮಾನಸಾಂತರವನ್ನು ಹುಟ್ಟಿಸುವದು ಅಸಾಧ್ಯ; ಯಾಕಂದರೆ ಅವರು ತಮ್ಮ ಪಾಲಿಗೆ ದೇವರ ಮಗನನ್ನು ಪುನಃ ಶಿಲುಬೆಗೆ ಹಾಕುವವರೂ ಆತನನ್ನು ಬಹಿರಂಗ ವಾಗಿ ಅವಮಾನಪಡಿಸುವವರೂ ಆಗಿದ್ದಾರೆ.

ಸಂದರ್ಭದೊಂದಿಗೆ ಓದಿ · ಇಬ್ರಿಯರಿಗೆ 6

4ಒಂದು ಸಾರಿ ಬೆಳಕನ್ನು ಹೊಂದಿ ಪರಲೋಕ ದಿಂದಾದ ದಾನದ ರುಚಿಯನ್ನು ನೋಡಿ ಪವಿತ್ರಾತ್ಮನಲ್ಲಿ ಪಾಲುಗಾರರಾಗಿ

5ಶ್ರೇಷ್ಠವಾದ ದೇವರ ವಾಕ್ಯವನ್ನೂ ಬರುವ ಲೋಕದ ಮಹತ್ವವನ್ನೂ ರುಚಿನೋಡಿ ದವರು ಬಿದ್ದು ಹೋಗುವದಾದರೆ

6ಅವರಲ್ಲಿ ತಿರಿಗಿ ಮಾನಸಾಂತರವನ್ನು ಹುಟ್ಟಿಸುವದು ಅಸಾಧ್ಯ; ಯಾಕಂದರೆ ಅವರು ತಮ್ಮ ಪಾಲಿಗೆ ದೇವರ ಮಗನನ್ನು ಪುನಃ ಶಿಲುಬೆಗೆ ಹಾಕುವವರೂ ಆತನನ್ನು ಬಹಿರಂಗ ವಾಗಿ ಅವಮಾನಪಡಿಸುವವರೂ ಆಗಿದ್ದಾರೆ.

7ಭೂಮಿಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು ಅದು ಯಾರ ನಿಮಿತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ ಅವರಿಗೆ ಅನುಕೂಲ ವಾದ ಬೆಳೆಯನ್ನು ಕೊಟ್ಟರೆ ದೇವರ ಆಶೀರ್ವಾದವನ್ನು ಹೊಂದುತ್ತದೆ;

8ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ ತಿರಸ್ಕರಿಸಲ್ಪಟ್ಟು ಶಾಪಕ್ಕೆ ಗುರಿಯಾಗುತ್ತದೆ. ಅದರ ಅಂತ್ಯವು ಸುಡಲ್ಪಡುವದೇ.

ಇಬ್ರಿಯರಿಗೆ 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी