ಓ ದೇವರೇ, ನಾನು ಮುಪ್ಪಿನವನೂ ನರೆ ಕೂದಲಿನವನೂ ಆದಾಗ ಈ ಸಂತತಿಯವರಿಗೆ ನಿನ್ನ ಶಕ್ತಿಯನ್ನೂ ಮುಂದೆ ಬರುವ ಪ್ರತಿಯೊಬ್ಬನಿಗೆ ನಿನ್ನ ಅಧಿಕಾರವನ್ನೂ ತಿಳಿಸುವ ವರೆಗೂ ನನ್ನನ್ನು ಕೈಬಿಡಬೇಡ.
16ಕರ್ತನಾದ ದೇವರ ಶಕ್ತಿಯಲ್ಲಿ ನಾನು ಹೋಗುವೆನು, ನಿನ್ನ ನೀತಿಯನ್ನು ಹೌದು, ನಿನ್ನದನ್ನೇ ತಿಳಿಸುವೆನು.
17ಓ ದೇವರೇ, ನನ್ನ ಯೌವನದಿಂದ ನನಗೆ ನೀನು ಕಲಿಸಿದ್ದೀ; ಈ ವರೆಗೂ ನಿನ್ನ ಅದ್ಭುತ ಕಾರ್ಯಗಳನ್ನು ತಿಳಿಸುವೆನು.
18ಓ ದೇವರೇ, ನಾನು ಮುಪ್ಪಿನವನೂ ನರೆ ಕೂದಲಿನವನೂ ಆದಾಗ ಈ ಸಂತತಿಯವರಿಗೆ ನಿನ್ನ ಶಕ್ತಿಯನ್ನೂ ಮುಂದೆ ಬರುವ ಪ್ರತಿಯೊಬ್ಬನಿಗೆ ನಿನ್ನ ಅಧಿಕಾರವನ್ನೂ ತಿಳಿಸುವ ವರೆಗೂ ನನ್ನನ್ನು ಕೈಬಿಡಬೇಡ.
19ಓ ದೇವರೇ, ಮಹತ್ಕಾರ್ಯಗಳನ್ನು ಮಾಡಿದ ನಿನ್ನ ನೀತಿಯು ಬಹಳ ಉನ್ನತವಾಗಿದೆ. ಓ ದೇವರೇ, ನಿನ್ನ ಹಾಗೆ ಯಾರಿದ್ದಾರೆ!
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ