೧ ಸಮುವೇಲನು 14:8

ಆಗ ಯೋನಾತಾನನುಇಗೋ, ನಾವು ಆ ಮನುಷ್ಯರ ಬಳಿಗೆ ದಾಟಿ ಹೋಗಿ ಅವರಿಗೆ ಕಾಣಿಸಿಕೊಳ್ಳುವೆವು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 14

6ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ಯೌವನಸ್ಥನಿಗೆ--ನಾವು ಈ ಸುನ್ನತಿ ಇಲ್ಲದವರ ಠಾಣಕ್ಕೆ ದಾಟಿಹೋಗೋಣ ಬಾ; ಒಂದು ವೇಳೆ ದೇವರು ನಮಗೋಸ್ಕರ ಕಾರ್ಯ ನಡಿಸುವನು. ಯಾಕಂದರೆ ಅನೇಕ ಜನರಿಂದಾದರೂ ಸ್ವಲ್ಪ ಜನರಿಂದಾದರೂ ರಕ್ಷಿಸುವದಕ್ಕೆ ಕರ್ತನಿಗೆ ಯಾವ ಆಟಂಕವಿಲ್ಲ ಅಂದನು.

7ಅದಕ್ಕೆ ಅವನ ಆಯುಧಗಳನ್ನು ಹೊರುವವನು ಅವನಿಗೆ--ನಿನ್ನ ಹೃದಯದಲ್ಲಿ ಇರುವದನ್ನೆಲ್ಲಾ ಮಾಡು, ನಡೆ; ಇಗೋ, ನಿನ್ನ ಹೃದಯಕ್ಕೆ ಸರಿಯಾಗಿ ನಾನೂ ನಿನ್ನ ಸಂಗಡ ಇದ್ದೇನೆ ಅಂದನು.

8ಆಗ ಯೋನಾತಾನನುಇಗೋ, ನಾವು ಆ ಮನುಷ್ಯರ ಬಳಿಗೆ ದಾಟಿ ಹೋಗಿ ಅವರಿಗೆ ಕಾಣಿಸಿಕೊಳ್ಳುವೆವು.

9ಅವರು--ನಾವು ನಿಮ್ಮ ಬಳಿಗೆ ಬರುವ ವರೆಗೆ ಸುಮ್ಮನೆ ನಿಲ್ಲಿರೆಂದು ನಮ್ಮ ಸಂಗಡ ಹೇಳಿದರೆ ನಾವು ಅವರ ಬಳಿಗೆ ಹೋಗದೆ ನಮ್ಮ ಸ್ಥಳದಲ್ಲಿ ನಿಲ್ಲುವೆವು.

10ಒಂದು ವೇಳೆ ಅವರುನಮ್ಮ ಬಳಿಗೆ ಬನ್ನಿರಿ ಎಂದು ಹೇಳಿದರೆ ಹೋಗುವೆವು. ಕರ್ತನು ಅವರನ್ನು ನಮ್ಮ ಕೈಗೆ ಒಪ್ಪಿಸಿ ಕೊಟ್ಟನೆಂಬದಕ್ಕೆ ಇದೇ ನಮಗೆ ಗುರುತಾಗಿರುವದು ಅಂದನು.

೧ ಸಮುವೇಲನು 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी