ಕರ್ತನು ಮೋವಾಬಿನ ವಿಷಯವಾಗಿ ಹಿಂದೆ ನುಡಿದ ಮಾತು ಇದೇ.
11ಆದದರಿಂದ ಮೋವಾಬಿನ ನಿಮಿತ್ತ ನನ್ನ ಕರುಳುಗಳು ಮತ್ತು ಕೀರ್ ಹರೇಷೆಥಿನ ನಿಮಿತ್ತ ನನ್ನ ಅಂತರಿಂದ್ರಿಯಗಳು ಕಿನ್ನರಿಯಂತೆ ಸ್ವರಗೈಯುವವು.
12ಹೀಗಿರುವಲ್ಲಿ ಮೋವಾಬು ಉನ್ನತ ಸ್ಥಳದಲ್ಲಿ ಆಯಾಸಗೊಂಡಂತೆ ಕಾಣಿಸಿಕೊಂಡು ಪರಿಶುದ್ಧಸ್ಥಳಕ್ಕೆ ಪ್ರಾರ್ಥನೆಗಾಗಿ ಬಂದರೂ ಅವನಿಗೆ ಸಫಲವಾಗದು.
13ಕರ್ತನು ಮೋವಾಬಿನ ವಿಷಯವಾಗಿ ಹಿಂದೆ ನುಡಿದ ಮಾತು ಇದೇ.
14ಆದರೆ ಕರ್ತನು ಮಾತನಾಡಿ--ಮೂರು ವರುಷ ಗಳಲ್ಲಿ ಕೂಲಿಯಾಳಿನ ವರುಷಗಳಂತೆ ಮೋವಾಬಿನ ಮಹಿಮೆಯು ಆ ಎಲ್ಲಾ ದೊಡ್ಡ ಸಮೂಹದೊಂದಿಗೆ ತಿರಸ್ಕರಿಸಲ್ಪಡುವ ಹಾಗೆ ಉಳಿದವರು ಚಿಕ್ಕ ಗುಂಪಾಗಿ ಬಲಹೀನರಾಗುವರು ಎಂದು ಹೇಳಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ