ಯೆಹೆಜ್ಕೇಲನು 14:5

ಹೀಗೆ ನಾನು ಇಸ್ರಾಯೇಲಿನ ಮನೆತನ ದವರನ್ನು ಅವರ ಸ್ವಂತ ಹೃದಯದಿಂದಲೇ ಸಿಕ್ಕಿಸಿ ಹಿಡಿಯುತ್ತೇನೆ. ಯಾಕಂದರೆ ಅವರೆಲ್ಲರೂ ತಮ್ಮ ವಿಗ್ರಹಗಳ ಮುಖಾಂತರ ನನಗೆ ಅನ್ಯರಾದರು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 14

3ಮನುಷ್ಯಪುತ್ರನೇ, ಈ ಮನು ಷ್ಯರು ತಮ್ಮ ವಿಗ್ರಹಗಳನ್ನು ತಮ್ಮ ಹೃದಯಗಳಲ್ಲೇ ಸ್ಥಾಪಿಸಿ ತಮ್ಮ ಅಕ್ರಮವಾದ ಎಡೆತಡೆಗಳನ್ನು ತಮ್ಮ ಮುಖದ ಮುಂದೆಯೇ ಇಟ್ಟುಕೊಂಡಿದ್ದಾರೆ. ಇವರೆಲ್ಲ ರನ್ನೂ ನಾನು ವಿಚಾರಿಸಬೇಕೇ?

4ಆದದರಿಂದ ನೀನು ಅವರ ಸಂಗಡ ಮಾತನಾಡಿ ಹೇಳಬೇಕಾದದ್ದೇನಂದರೆ --ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾ ಯೇಲಿನ ಮನೆತನದವರ ಪ್ರತಿಯೊಬ್ಬನೂ ತಮ್ಮ ವಿಗ್ರಹಗಳನ್ನು ಹೃದಯಗಳಲ್ಲಿ ನೆಲೆಗೊಳಿಸಿ ಅಕ್ರಮದ ಎಡೆತಡೆಗಳನ್ನು ತಮ್ಮ ಮುಂದೆ ಇಟ್ಟುಕೊಂಡು ಪ್ರವಾ ದಿಯ ಬಳಿಗೆ ಬರುವ ಮನುಷ್ಯನು ಯಾವನೋ ಅವನಿಗೆ ಕರ್ತನಾದ ನಾನು ಅವರ ವಿಗ್ರಹಗಳ ಸಮೂ ಹಕ್ಕೆ ತಕ್ಕ ಹಾಗೆ ಉತ್ತರ ಕೊಡುತ್ತೇನೆ.

5ಹೀಗೆ ನಾನು ಇಸ್ರಾಯೇಲಿನ ಮನೆತನ ದವರನ್ನು ಅವರ ಸ್ವಂತ ಹೃದಯದಿಂದಲೇ ಸಿಕ್ಕಿಸಿ ಹಿಡಿಯುತ್ತೇನೆ. ಯಾಕಂದರೆ ಅವರೆಲ್ಲರೂ ತಮ್ಮ ವಿಗ್ರಹಗಳ ಮುಖಾಂತರ ನನಗೆ ಅನ್ಯರಾದರು.

6ಇಸ್ರಾಯೇಲಿನ ಮನೆತನದವರಿಗೆ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಮಾನ ಸಾಂತರಪಟ್ಟು ನಿಮ್ಮ ವಿಗ್ರಹಗಳನ್ನು ಬಿಟ್ಟು ನೀವಾ ಗಿಯೇ ತಿರುಗಿ ಕೊಳ್ಳಿರಿ; ನಿಮ್ಮ ಅಸಹ್ಯವಾದವುಗಳ ನ್ನೆಲ್ಲಾ ಬಿಟ್ಟು ನಿಮ್ಮ ಮುಖಗಳನ್ನು ತಿರುಗಿಸಿರಿ.

7ನನಗೆ ತನ್ನನ್ನು ಅನ್ಯನನ್ನಾಗಿ ಮಾಡಿಕೊಂಡು ತನ್ನ ಹೃದಯದಲ್ಲಿ ವಿಗ್ರಹಗಳನ್ನು ಸ್ಥಾಪಿಸಿ ಅಕ್ರಮದ ಎಡೆತಡೆಯನ್ನು ತನ್ನ ಮುಖದ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ನನ್ನ ವಿಷಯವಾಗಿ ವಿಚಾರಿಸಲು ಬರುವ ಪ್ರತಿಯೊಬ್ಬ ಇಸ್ರಾಯೇಲಿನ ಮನೆತನದವರಲ್ಲಿಯೂ ಇಸ್ರಾಯೇಲಿನಲ್ಲಿ ತಂಗುವ ಅನ್ಯರಲ್ಲಿಯೂ ಪ್ರತಿಯೊ ಬ್ಬನಿಗೂ ಕರ್ತನಾದ ನಾನೇ ಉತ್ತರ ಕೊಡುತ್ತೇನೆ.

ಯೆಹೆಜ್ಕೇಲನು 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी