ಹಗ್ಗಾಯ 2:3

ಈ ಆಲಯವನ್ನು ಅದರ ಪೂರ್ವದ ಮಹಿಮೆಯಲ್ಲಿ ನೋಡಿದವರೊಳಗೆ ಉಳಿದ ವರು ನಿಮ್ಮಲ್ಲಿ ಯಾರು? ಈಗ ಅದನ್ನು ಹೇಗೆ ನೋಡು ತ್ತೀರಿ? ಇದು ನಿಮ್ಮ ಕಣ್ಣುಗಳಿಗೆ ಅದರ ಹೋಲಿಕೆಯು ಏನೂ ಇಲ್ಲದ ಹಾಗೆ ತೋರು ತ್ತದಲ್ಲವೋ?

ಸಂದರ್ಭದೊಂದಿಗೆ ಓದಿ · ಹಗ್ಗಾಯ 2

1ಏಳನೆಯ ತಿಂಗಳಿನಲ್ಲಿ, ತಿಂಗಳಿನ ಇಪ್ಪ ತ್ತೊಂದನೆಯ ದಿನದಲ್ಲಿ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನ ಮೂಲಕ ಉಂಟಾಯಿತು; ಏನಂದರೆ--

2ಯೆಹೂದದ ಅಧಿಪತಿಯಾದ ಶೆಯಲ್ತೀ ಯೇಲನ ಮಗನಾದ ಜೆರುಬ್ಬಾಬೆಲನಿಗೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನಿಗೂ ಜನರಲ್ಲಿ ಉಳಿದವರಿಗೂ ನೀನು ಹೇಳತಕ್ಕದ್ದೇನಂದರೆ--

3ಈ ಆಲಯವನ್ನು ಅದರ ಪೂರ್ವದ ಮಹಿಮೆಯಲ್ಲಿ ನೋಡಿದವರೊಳಗೆ ಉಳಿದ ವರು ನಿಮ್ಮಲ್ಲಿ ಯಾರು? ಈಗ ಅದನ್ನು ಹೇಗೆ ನೋಡು ತ್ತೀರಿ? ಇದು ನಿಮ್ಮ ಕಣ್ಣುಗಳಿಗೆ ಅದರ ಹೋಲಿಕೆಯು ಏನೂ ಇಲ್ಲದ ಹಾಗೆ ತೋರು ತ್ತದಲ್ಲವೋ?

4ಆದಾಗ್ಯೂ ಈಗ ಕರ್ತನು ಹೇಳುತ್ತಾನೆ --ಜೆರುಬ್ಬಾಬೆಲನೇ, ಬಲವಾಗಿರು; ಪ್ರಧಾನ ಯಾಜಕ ನಾದ ಯೆಹೋಚಾದಾಕನ ಮಗನಾದ ಯೆಹೋ ಶುವನೇ, ಬಲವಾಗಿರು; ದೇಶದ ಜನರೆಲ್ಲರೇ, ಬಲ ವಾಗಿರ್ರಿ ಎಂದು ಕರ್ತನು ಹೇಳುತ್ತಾನೆ; ಕೆಲಸ ಮಾಡಿರಿ; ನಾನು ನಿಮ್ಮ ಸಂಗಡ ಇದ್ದೇನೆಂದು ಸೈನ್ಯ ಗಳ ಕರ್ತನು ಹೇಳುತ್ತಾನೆ.

5ನೀವು ಐಗುಪ್ತದೊಳ ಗಿಂದ ಹೊರಗೆ ಬಂದಾಗ ನಾನು ನಿಮ್ಮ ಸಂಗಡ ಒಡಂಬಡಿಕೆ ಮಾಡಿದ ವಾಕ್ಯದ ಪ್ರಕಾರ ನನ್ನ ಆತ್ಮವು ನಿಮ್ಮ ಮಧ್ಯದಲ್ಲಿ ನಿಲ್ಲುತ್ತದೆ; ನೀವು ಭಯಪಡ ಬೇಡಿರಿ.

ಹಗ್ಗಾಯ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी