ಆದಿಕಾಂಡ 21:15

ತಿತ್ತಿಯೊಳಗಿನ ನೀರು ಮುಗಿದಾಗ ಆಕೆಯು ಮಗುವನ್ನು ಗಿಡಗಳಲ್ಲಿ ಒಂದರ ಕೆಳಗೆ ಮಲಗಿಸಿ

ಸಂದರ್ಭದೊಂದಿಗೆ ಓದಿ · ಆದಿಕಾಂಡ 21

13ದಾಸಿಯ ಮಗನು ಸಹ ನಿನ್ನ ಸಂತಾನವಾಗಿರುವದರಿಂದ ಅವನನ್ನು ನಾನು ಜನಾಂಗ ವಾಗ ಮಾಡುವೆನು ಅಂದನು.

14ಅಬ್ರಹಾಮನು ಬೆಳಿಗ್ಗೆ ಎದ್ದು ರೊಟ್ಟಿಯನ್ನೂ ನೀರಿನ ತಿತ್ತಿಯನ್ನೂ ತೆಗೆದುಕೊಂಡು ಹಾಗರಳಿಗೆ ಕೊಟ್ಟು ಅವುಗಳನ್ನು ಆಕೆಯ ಹೆಗಲಿನ ಮೇಲೆ ಇರಿಸಿ ಆ ಹುಡುಗನ ಸಂಗಡ ಅವಳನ್ನು ಕಳುಹಿಸಿಬಿಟ್ಟನು. ಆಕೆಯು ಹೋಗಿ ಬೇರ್ಷೆಬದ ಕಾಡಿನಲ್ಲಿ ಅಲೆದಾಡುವವ ಳಾದಳು.

15ತಿತ್ತಿಯೊಳಗಿನ ನೀರು ಮುಗಿದಾಗ ಆಕೆಯು ಮಗುವನ್ನು ಗಿಡಗಳಲ್ಲಿ ಒಂದರ ಕೆಳಗೆ ಮಲಗಿಸಿ

16ಬಿಲ್ಲೆಸೆಯುವಷ್ಟು ದೂರ ಹೋಗಿ ಅವನಿಗೆ ಎದುರಾಗಿ ಕೂತುಕೊಂಡು--ಮಗುವಿನ ಸಾವನ್ನು ನಾನು ನೋಡಲಾರೆನು ಎಂದು ಹೇಳಿ ಆಕೆಯು ತನ್ನ ಸ್ವರವೆತ್ತಿ ಅತ್ತಳು.

17ಆಗ ದೇವರು ಆ ಹುಡುಗನ ಸ್ವರವನ್ನು ಕೇಳಿದನು. ಆಗ ದೇವದೂತನು ಆಕಾಶದೊಳಗಿಂದ ಹಾಗರಳನ್ನು ಕರೆದು ಆಕೆಗೆ--ಹಾಗರಳೇ, ನಿನ್ನ ವ್ಯಥೆಯೇನು? ಅಂಜಬೇಡ; ದೇವರು ಹುಡುಗನ ಸ್ವರವನ್ನು ಅವನು ಇದ್ದಲ್ಲಿಂದ ಕೇಳಿದ್ದಾನೆ.

ಆದಿಕಾಂಡ 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी