೨ ಪೂರ್ವಕಾಲವೃತ್ತಾಂತ 5:11

ಇದಲ್ಲದೆ ಅಲ್ಲಿ ಇದ್ದ ಸಮಸ್ತ ಯಾಜಕರು ಪರಿಶುದ್ಧ ವಾಗಿದ್ದು ಸರದಿಗಳ ಪ್ರಕಾರ ಕಾಯದೆ ಇದ್ದದರಿಂದ

ಸಂದರ್ಭದೊಂದಿಗೆ ಓದಿ · ೨ ಪೂರ್ವಕಾಲವೃತ್ತಾಂತ 5

9ಆಗ ಕೋಲುಗಳ ಕೊನೆಗಳು ದೈವೋಕ್ತಿಯ ಮುಂದೆ ಮಂಜೂಷದಿಂದ ಕಾಣಲ್ಪಡುವ ಹಾಗೆ ಕೋಲುಗಳನ್ನು ಎಳಕೊಂಡರು. ಆದರೆ ಅವು ಹೊರಗೆ ಕಾಣಲ್ಪಡಲಿಲ್ಲ. ಅದು ಅಲ್ಲಿ ಇಂದಿನ ವರೆಗೂ ಇರು ತ್ತದೆ.

10ಇಸ್ರಾಯೇಲ್‌ ಮಕ್ಕಳು ಐಗುಪ್ತದೇಶದಿಂದ ಬಂದ ನಂತರ ಕರ್ತನು ಅವರ ಸಂಗಡ ಒಡಂಬಡಿಕೆ ಯನ್ನು ಮಾಡಿದಾಗ ಮೋಶೆಯು ಹೋರೇಬಿನ ಬಳಿ ಯಲ್ಲಿ ಮಂಜೂಷದೊಳಗೆ ಇಟ್ಟ ಕಲ್ಲಿನ ಎರಡು ಹಲಿಗೆಗಳ ಹೊರತು ಅದರಲ್ಲಿ ಮತ್ತೇನೂ ಇರಲಿಲ್ಲ.

11ಇದಲ್ಲದೆ ಅಲ್ಲಿ ಇದ್ದ ಸಮಸ್ತ ಯಾಜಕರು ಪರಿಶುದ್ಧ ವಾಗಿದ್ದು ಸರದಿಗಳ ಪ್ರಕಾರ ಕಾಯದೆ ಇದ್ದದರಿಂದ

12ಯಾಜಕರು ಪರಿಶುದ್ಧ ಸ್ಥಳದಿಂದ ಹೊರ ಟಾಗ ಸಂಗೀತಗಾರರಾಗಿರುವ ಲೇವಿಯರೂ ಆಸಾಫ್‌, ಹೇಮಾನ್‌, ಯೆದೂತೂನ್‌ ಇವರೆಲ್ಲರೂ ಅವರ ಮಕ್ಕಳೂ ಸಹೋದರರೂ ನಾರು ಮಡಿಯನ್ನು ಧರಿಸಿ ಕೊಂಡು ತಾಳ ವೀಣೆ ಕಿನ್ನರಿಗಳನ್ನು ಹಿಡಿದು ಬಲಿ ಪೀಠದ ಮೂಡಣ ಪಾರ್ಶ್ವದಲ್ಲಿ ನಿಂತುಕೊಂಡರು; ಅವರ ಸಂಗಡ ನೂರ ಇಪ್ಪತ್ತು ಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಇದ್ದರು.

13ತುತೂರಿ ಊದುವವರೂ ಸಂಗೀತಗಾರರೂ ಕರ್ತನನ್ನು ಕೊಂಡಾ ಡುತ್ತಾ ಹೊಗಳುತ್ತಾ ಏಕವಾಗಿ ಒಂದೇ ಶಬ್ದ ಮಾಡಿ ದಾಗ ತುತೂರಿ ತಾಳ ಮೊದಲಾದ ಗೀತ ವಾದ್ಯಗಳಿಂದ ತಮ್ಮ ಶಬ್ದವನ್ನೆತ್ತಿ--ಆತನು ಒಳ್ಳೆಯವನೆಂದೂ ಆತನ ಕೃಪೆಯು ಯುಗಯುಗಕ್ಕೂ ಇರುವದೆಂದೂ ಕರ್ತನನ್ನು ಕೀರ್ತಿಸುವಾಗ ಕರ್ತನ ಆಲಯವು ಮೇಘದಿಂದ ತುಂಬಲ್ಪಟ್ಟಿತು.

೨ ಪೂರ್ವಕಾಲವೃತ್ತಾಂತ 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी