ಯೆರೆಮಿಯ 7:30

ಯೆಹೂದನ ಮಕ್ಕಳು ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದಾರೆಂದು ಕರ್ತನು ಅನ್ನುತ್ತಾನೆ; ನನ್ನ ಹೆಸರಿನಿಂದ ಕರೆಯಲ್ಪಟ್ಟ ಆಲಯದಲ್ಲಿ ಅದನ್ನು ಅಪವಿತ್ರ ಮಾಡುವದಕ್ಕೆ ತಮ್ಮ ಅಸಹ್ಯವಾದ ವುಗಳನ್ನು ಇಟ್ಟಿದ್ದಾರೆ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 7

28ಹಾಗಾದರೆ ನೀನು ಅವರಿಗೆ--ತನ್ನ ದೇವರಾದ ಕರ್ತನ ಸ್ವರಕ್ಕೆ ವಿಧೇಯವಾಗದಂಥ ಇಲ್ಲವೆ ಶಿಕ್ಷೆಯನ್ನು ಅಂಗೀಕರಿಸ ದಂಥ ಜನಾಂಗವಾಗಿದೆ; ಸತ್ಯವು ನಾಶವಾಯಿತು, ಅದು ಅವರ ಬಾಯಿಯೊಳಗಿಂದ ಕಡಿದುಹಾಕಲ್ಪಟ್ಟಿದೆ.

29ಯೆರೂಸಲೇಮೇ, ನಿನ್ನ ಕೂದಲನ್ನು ಕತ್ತರಿಸಿ ಬಿಸಾಡಿಬಿಡು; ಉನ್ನತ ಸ್ಥಳಗಳಲ್ಲಿ ಗೋಳಾಟವನ್ನು ಎತ್ತು; ಕರ್ತನು ತನ್ನ ಉಗ್ರದ ಸಂತತಿಯನ್ನು ನಿರಾಕರಿಸಿ ತಳ್ಳಿ ಬಿಟ್ಟಿದ್ದಾನೆ;

30ಯೆಹೂದನ ಮಕ್ಕಳು ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದಾರೆಂದು ಕರ್ತನು ಅನ್ನುತ್ತಾನೆ; ನನ್ನ ಹೆಸರಿನಿಂದ ಕರೆಯಲ್ಪಟ್ಟ ಆಲಯದಲ್ಲಿ ಅದನ್ನು ಅಪವಿತ್ರ ಮಾಡುವದಕ್ಕೆ ತಮ್ಮ ಅಸಹ್ಯವಾದ ವುಗಳನ್ನು ಇಟ್ಟಿದ್ದಾರೆ.

31ಹಿನ್ನೋಮನ ಮಗನ ತಗ್ಗಿನಲ್ಲಿರುವ ತೋಫೆತಿನ ಉನ್ನತ ಸ್ಥಳಗಳನ್ನು ತಮ್ಮ ಕುಮಾರ ಕುಮಾರ್ತೆಯರನ್ನು ಬೆಂಕಿಯಲ್ಲಿ ಸುಡುವದಕ್ಕೆ ಕಟ್ಟಿದ್ದಾರೆ; ಇದನ್ನು ನಾನು ಆಜ್ಞಾಪಿಸಲಿಲ್ಲ, ಇಲ್ಲವೆ ಅದು ನನ್ನ ಮನಸ್ಸಿನಲ್ಲಿ ಬರಲಿಲ್ಲ.

32ಆದದರಿಂದ ಕರ್ತನು ಅನ್ನುವದೇನಂದರೆ--ಇಗೋ, ದಿನಗಳು ಬರುವವು; ಆಗ ಅದು ಇನ್ನು ತೋಫೆತೆಂದೂ ಹಿನ್ನೋಮನ ಮಗನ ತಗ್ಗು ಎಂದೂ ಕರೆಯಲ್ಪಡುವದೇ ಇಲ್ಲ; ಆದರೆ ಕೊಲೆಯ ತಗ್ಗು ಎಂದು ಅದಕ್ಕೆ ಹೆಸರಾಗುವದು. ಯಾಕಂದರೆ ಸ್ಥಳವಿಲ್ಲದ ವರೆಗೂ ತೋಫೆತಿನಲ್ಲಿ ಅವರು ಹೂಣಿಡುವರು.

ಯೆರೆಮಿಯ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी