ಎಸ್ತೇರಳು 2:16

ಎಸ್ತೇರಳು ಅರಸನಾದ ಅಹಷ್ವೇರೋಷನ ಆಳಿಕೆಯ ಏಳನೇ ವರುಷದ ಹತ್ತನೇ ತಿಂಗಳಿನ ತೇಬೆತ್‌ ಎಂಬ ದಿವಸದಲ್ಲಿ ಅವನ ಅರಮನೆಯಲ್ಲಿ ತರಲ್ಪಟ್ಟಳು.

ಸಂದರ್ಭದೊಂದಿಗೆ ಓದಿ · ಎಸ್ತೇರಳು 2

14ಅವಳು ಸಾಯಂಕಾಲದಲ್ಲಿ ಪ್ರವೇಶಿಸಿ ಮಾರನೆ ದಿವಸದಲ್ಲಿ ಉಪಪತ್ನಿಗಳ ಕಾವಲಿನವನಾದಂಥ ಅರಸನ ಅಧಿಕಾರಿ ಯಾದಂಥ ಶವಷ್ಗಜನ ಕೈಗೆ ಸ್ತ್ರೀಯರ ಎರಡನೇ ಮನೆಗೆ ತಿರುಗುವಳು. ಅರಸನು ಯಾರಲ್ಲಿ ಸಂತೋಷಪಟ್ಟು ಅವಳನ್ನು ಹೆಸರಿನಿಂದ ಕರೆದರೆ ಹೊರತು ಅವಳು ಇನ್ನು ಮೇಲೆ ಅರಸನ ಬಳಿಯಲ್ಲಿ ಪ್ರವೇಶಿಸದೆ ಇರುವಳು.

15ತನ್ನ ಕುಮಾರ್ತೆಯಾಗಿ ತೆಗೆದುಕೊಂಡಂಥ ಮೊರ್ದೆಕೈಯ ಚಿಕ್ಕಪ್ಪನಾದ ಅಬೀಹೈಲನ ಮಗಳಾದ ಎಸ್ತೇರಳು ಅರಸನ ಬಳಿಗೆ ಹೋಗಲು ಸರದಿ ಬಂದಾಗ ಅವಳು ಸ್ತ್ರೀಯರ ಕಾವಲುಗಾರನಾದಂಥ ಅರಸನ ಮನೆವಾರ್ತೆಯವನಾದಂಥ ಹೇಗೈ ನೇಮಿಸಿದವುಗಳ ಹೊರತಾಗಿ ಮತ್ತೇನೂ ಬೇಡಲಿಲ್ಲ. ಇದಲ್ಲದೆ ಎಸ್ತೇರಳು ತನ್ನನ್ನು ನೋಡುವ ಎಲ್ಲರಿಂದ ದಯೆಹೊಂದಿದ್ದಳು.

16ಎಸ್ತೇರಳು ಅರಸನಾದ ಅಹಷ್ವೇರೋಷನ ಆಳಿಕೆಯ ಏಳನೇ ವರುಷದ ಹತ್ತನೇ ತಿಂಗಳಿನ ತೇಬೆತ್‌ ಎಂಬ ದಿವಸದಲ್ಲಿ ಅವನ ಅರಮನೆಯಲ್ಲಿ ತರಲ್ಪಟ್ಟಳು.

17ಅರಸನು ಸಕಲ ಸ್ತ್ರೀಯರಿಗಿಂತ ಎಸ್ತೇರಳನ್ನು ಪ್ರೀತಿ ಮಾಡಿದನು. ಅವಳಿಗೆ ಅವನ ಸಮ್ಮುಖದಲ್ಲಿ ಸಮಸ್ತ ಕನ್ಯಾಸ್ತ್ರೀಯರಿಗಿಂತ ಹೆಚ್ಚು ದಯವೂ ಕೃಪೆಯೂ ದೊರಕಿತು. ಆದದರಿಂದ ಅವನು ರಾಜಕಿರೀಟವನ್ನು ಅವಳ ತಲೆಯ ಮೇಲೆ ಇರಿಸಿ ಅವಳನ್ನು ವಷ್ಟಿಗೆ ಬದಲಾಗಿ ರಾಣಿಯಾಗಿ ಮಾಡಿದನು.

18ಆಗ ಅರಸನು ತನ್ನ ಸಮಸ್ತ ಪ್ರಧಾನರಿಗೂ ಸೇವಕರಿಗೂ ಎಸ್ತೇರಳ ಔತಣವೆಂದು ದೊಡ್ಡ ಔತಣವನ್ನು ಮಾಡಿಸಿ ಪ್ರಾಂತ್ಯ ಗಳಿಗೆ ಬಿಡುಗಡೆಯನ್ನು ಕೊಟ್ಟು ಅರಸನ ಸ್ಥಿತಿಗೆ ತಕ್ಕಂಥ ಬಹುಮಾನಗಳನ್ನು ಕೊಟ್ಟನು.

ಎಸ್ತೇರಳು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी