ದಾನಿಯೇಲನು 2:3

ಆಗ ಅರಸನು ಅವರಿಗೆ--ನಾನು ಒಂದು ಕನಸ್ಸು ಕಂಡಿದ್ದೇನೆ; ಆ ಕನಸಿನ ಅರ್ಥವನ್ನು ತಿಳಿಯುವದಕ್ಕಾಗಿ ನನ್ನ ಆತ್ಮವು ಕಳವಳಗೊಂಡಿದೆ ಅಂದನು.

ಸಂದರ್ಭದೊಂದಿಗೆ ಓದಿ · ದಾನಿಯೇಲನು 2

1ನೆಬೂಕದ್ನೆಚ್ಚರನ ಆಳಿಕೆಯ ಎರಡನೆಯ ವರುಷದಲ್ಲಿ ನೆಬೂಕದ್ನೆಚ್ಚರನು ಕಂಡ ಕನಸುಗಳ ಪರಿಣಾಮದಿಂದ ಅವನ ಆತ್ಮವು ಕಳವಳ ಗೊಂಡು ನಿದ್ರೆಯು ಅವನನ್ನು ಬಿಟ್ಟು ಹೋಯಿತು.

2ಆಗ ಅರಸನಿಗೆ ತನ್ನ ಕನಸುಗಳನ್ನು ತಿಳಿಸುವ ಹಾಗೆ ಅರಸನು ಮಂತ್ರಗಾರರನ್ನೂ ಜೋತಿಷ್ಯರನ್ನೂ ಮಾಟ ಗಾರರನ್ನೂ ಕಸ್ದೀಯರನ್ನೂ ಕರೆಯಲು ಆಜ್ಞಾಪಿಸಿ ದನು; ಇವರೆಲ್ಲರೂ ಬಂದು ಅರಸನ ಮುಂದೆ ನಿಂತರು.

3ಆಗ ಅರಸನು ಅವರಿಗೆ--ನಾನು ಒಂದು ಕನಸ್ಸು ಕಂಡಿದ್ದೇನೆ; ಆ ಕನಸಿನ ಅರ್ಥವನ್ನು ತಿಳಿಯುವದಕ್ಕಾಗಿ ನನ್ನ ಆತ್ಮವು ಕಳವಳಗೊಂಡಿದೆ ಅಂದನು.

4ಆಗ ಕಸ್ದೀಯರು ಅರಸನಿಗೆ ಅರಮಾಯ ಭಾಷೆಯಲ್ಲಿ ಹೇಳಿ ದ್ದೇನಂದರೆ--ಓ ಅರಸನೇ, ನಿರಂತರವಾಗಿ ಬಾಳು, ಕನಸನ್ನು ನಿನ್ನ ಸೇವಕರಿಗೆ ಹೇಳು; ಆಗ ನಾವು ಅದರ ಅರ್ಥಗಳನ್ನು ತಿಳಿಸುವೆವು ಅಂದರು.

5ಅರಸನು ಕಸ್ದೀ ಯರಿಗೆ ಪ್ರತ್ಯುತ್ತರವಾಗಿ--ಆ ಕನಸಿನ ಸಂಗತಿಯು ನನ್ನನ್ನು ಬಿಟ್ಟು ಹೋಯಿತು; ನೀವು ಕನಸನ್ನು ಅದರ ಅರ್ಥದೊಂದಿಗೆ ನನಗೆ ತಿಳಿಸದಿದ್ದರೆ ನೀವು ತುಂಡು ತುಂಡಾಗಿ ಕತ್ತರಿಸಲ್ಪಡುವಿರಿ; ನಿಮ್ಮ ಮನೆಗಳು ತಿಪ್ಪೆ ಗುಂಡಿಗಳನ್ನಾಗಿ ಮಾಡಿಸುವೆನು.

ದಾನಿಯೇಲನು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी