ಮತ್ತಾಯನು 26:23

ಅದಕ್ಕೆ ಆತನು ಪ್ರತ್ಯುತ್ತರವಾಗಿ--ನನ್ನ ಸಂಗಡ ಪಾತ್ರೆಯಲ್ಲಿ ಕೈ ಅದ್ದಿದವನೇ ನನ್ನನ್ನು ಹಿಡುಕೊಡುವನು.

ಸಂದರ್ಭದೊಂದಿಗೆ ಓದಿ · ಮತ್ತಾಯನು 26

21ಅವರು ಊಟಮಾಡು ತ್ತಿದ್ದಾಗ ಆತನು--ನಾನು ನಿಮಗೆ ನಿಜವಾಗಿ ಹೇಳು ತ್ತೇನೆ, ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡುಕೊಡುವನು ಅಂದನು.

22ಆಗ ಅವರು ಬಹಳ ದುಃಖಪಟ್ಟು--ಕರ್ತನೇ, ಅವನು ನಾನೋ ಎಂದು ಅವರಲ್ಲಿ ಪ್ರತಿಯೊಬ್ಬನು ಆತನನ್ನು ಕೇಳಲಾರಂಭಿಸಿದರು.

23ಅದಕ್ಕೆ ಆತನು ಪ್ರತ್ಯುತ್ತರವಾಗಿ--ನನ್ನ ಸಂಗಡ ಪಾತ್ರೆಯಲ್ಲಿ ಕೈ ಅದ್ದಿದವನೇ ನನ್ನನ್ನು ಹಿಡುಕೊಡುವನು.

24ಮನುಷ್ಯಕುಮಾರನು ತನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೋಗುತ್ತಾನೆ; ಆದರೆ ಮನುಷ್ಯಕುಮಾರನು ಯಾವನಿಂದ ಹಿಡಿದು ಕೊಡಲ್ಪಡುತ್ತಾನೋ ಆ ಮನುಷ್ಯನಿಗೆ ಅಯ್ಯೋ! ಆ ಮನುಷ್ಯನು ಹುಟ್ಟದೆ ಹೋಗಿದ್ದರೆ ಅವನಿಗೆ ಒಳ್ಳೇದಾಗುತ್ತಿತ್ತು ಅಂದನು.

25ಆಗ ಅವನನ್ನು ಹಿಡಿದುಕೊಡಬೇಕೆಂದಿದ್ದ ಯೂದನು--ಬೋಧಕನೇ, ಅವನು ನಾನೋ? ಅಂದದ್ದಕ್ಕೆ ಆತನು--ನೀನೇ ಹೇಳಿದ್ದೀ ಅಂದನು.

ಮತ್ತಾಯನು 26 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी