ಜೆಕರ್ಯ 8:14

ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಪಿತೃಗಳು ನನಗೆ ಸಿಟ್ಟು ಎಬ್ಬಿಸಿದಾಗ ನಾನು ನಿಮ್ಮನ್ನು ಶಿಕ್ಷಿಸುವದಕ್ಕೆ ಯೋಚಿಸಿದೆನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ; ನಾನು ಪಶ್ಚಾತ್ತಾಪ ಪಡಲಿಲ್ಲ.

ಸಂದರ್ಭದೊಂದಿಗೆ ಓದಿ · ಜೆಕರ್ಯ 8

12ಬೀಜವುವೃದ್ಧಿಯಾಗುವದು; ದ್ರಾಕ್ಷೇ ಬಳ್ಳಿ ತನ್ನ ಫಲವನ್ನು ಕೊಡುವದು; ಭೂಮಿಯು ತನ್ನ ಹುಟ್ಟುವಳಿಯನ್ನು ಹೆಚ್ಚಾಗಿ ಕೊಡುವದು; ಆಕಾಶ ಗಳು ತಮ್ಮ ಮಂಜನ್ನು ಕೊಡುವವು; ಈ ಜನರಲ್ಲಿ ಉಳಿದವರು ಇವುಗಳನ್ನೆಲ್ಲಾ ಸ್ವಾಧೀನ ಮಾಡಿಕೊಳ್ಳು ವಂತೆ ಮಾಡುವೆನು.

13ಆಗುವದೇನಂದರೆ, ಓ ಯೆಹೂದದ ಮನೆತನದವರೇ, ಇಸ್ರಾಯೇಲಿನ ಮನೆತನದವರೇ, ನೀವು ಜನಾಂಗಗಳಲ್ಲಿ ಶಾಪವಾಗಿದ್ದ ಪ್ರಕಾರ ನಾನು ನಿಮ್ಮನ್ನು ರಕ್ಷಿಸುವೆನು ಮತ್ತು ನೀವು ಆಶೀರ್ವಾದವಾಗಿರುವಿರಿ; ಭಯಪಡಬೇಡಿರಿ; ನಿಮ್ಮ ಕೈಗಳು ಬಲವಾಗಿರಲಿ.

14ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಪಿತೃಗಳು ನನಗೆ ಸಿಟ್ಟು ಎಬ್ಬಿಸಿದಾಗ ನಾನು ನಿಮ್ಮನ್ನು ಶಿಕ್ಷಿಸುವದಕ್ಕೆ ಯೋಚಿಸಿದೆನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ; ನಾನು ಪಶ್ಚಾತ್ತಾಪ ಪಡಲಿಲ್ಲ.

15ನಾನು ತಿರುಗಿ ಈ ದಿವಸಗಳಲ್ಲಿ ಯೆರೂಸಲೇಮಿಗೂ ಯೆಹೂದದ ಮನೆತನದವರಿಗೂ ಒಳ್ಳೇದನ್ನು ಮಾಡಲು ಯೋಚಿಸಿದ್ದೇನೆ; ನೀವು ಭಯ ಪಡಬೇಡಿರಿ.

16ನೀವು ಮಾಡತಕ್ಕ ಕಾರ್ಯಗಳು ಇವೇ--ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನು ಮಾತಾಡಲಿ; ನಿಜವಾದ ಸಮಾಧಾನಕರ ವಾದ ನ್ಯಾಯತೀರ್ವಿಕೆಯನ್ನು ನಿಮ್ಮ ಬಾಗಲು ಗಳಲ್ಲಿ ತೀರಿಸಿರಿ.

ಜೆಕರ್ಯ 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी