ಆಗ ಅವರ ಕಣ್ಣುಗಳು ತೆರೆಯಲ್ಪಟ್ಟದ್ದರಿಂದ ಅವರು ಆತನ ಗುರುತು ಹಿಡಿದರು; ಆತನು ಅವರ ದೃಷ್ಟಿಗೆ ಅದೃಶ್ಯನಾದನು.
29ಆದರೆ ಅವರು ಆತನಿಗೆ--ನಮ್ಮೊಂದಿಗೆ ಇರು; ಯಾಕಂದರೆ ಈಗ ಸಾಯಂಕಾಲ ವಾಗುತ್ತಾ ಇದೆ ಮತ್ತು ಹಗಲು ಬಹಳ ಮಟ್ಟಿಗೆ ಕಳೆಯಿತು ಎಂದು ಹೇಳಿ ಆತನನ್ನು ಬಲವಂತ ಮಾಡಿ ದರು. ಆಗ ಆತನು ಅವರೊಂದಿಗೆ ಇರುವದಕ್ಕಾಗಿ ಹೋದನು.
30ಇದಾದ ಮೇಲೆ ಆತನು ಅವರೊಂದಿಗೆ ಊಟಕ್ಕೆ ಕೂತುಕೊಂಡಿರಲು ರೊಟ್ಟಿಯನ್ನು ತೆಗೆದು ಕೊಂಡು ಆಶೀರ್ವದಿಸಿ ಮುರಿದು ಅವರಿಗೆ ಕೊಟ್ಟನು.
31ಆಗ ಅವರ ಕಣ್ಣುಗಳು ತೆರೆಯಲ್ಪಟ್ಟದ್ದರಿಂದ ಅವರು ಆತನ ಗುರುತು ಹಿಡಿದರು; ಆತನು ಅವರ ದೃಷ್ಟಿಗೆ ಅದೃಶ್ಯನಾದನು.
32ಆಗ ಅವರು ಒಬ್ಬರಿಗೊಬ್ಬರು--ಆತನು ದಾರಿಯಲ್ಲಿ ನಮ್ಮ ಕೂಡ ಮಾತನಾಡುತ್ತಾ ಬರಹಗಳನ್ನು ನಮಗೆ ವಿವರಿಸಿದಾಗ ನಮ್ಮ ಹೃದಯವು ನಮ್ಮೊಳಗೆ ಕುದಿಯಿತಲ್ಲವೇ ಎಂದು ಅಂದುಕೊಂಡರು.
33ಅವರು ಅದೇ ಗಳಿಗೆಯಲ್ಲಿ ಯೆರೂಸಲೇಮಿಗೆ ಹಿಂದಿರುಗಿಹೋದರು. ಅಲ್ಲಿ ಹನ್ನೊಂದು ಮಂದಿ ಶಿಷ್ಯರೂ ಅವರೊಂದಿಗಿದ್ದವರೂ ಒಟ್ಟಾಗಿ ಕೂಡಿ ಕೊಂಡಿರುವದನ್ನು ಅವರು ಕಂಡರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ