ವಿಮೋಚನಕಾಂಡ 21:28

ಇದಲ್ಲದೆ ಯಾವದಾದರೂ ಒಂದು ಎತ್ತು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಹಾದು ಕೊಂದರೆ ಆ ಎತ್ತನ್ನು ಖಂಡಿತವಾಗಿ ಕಲ್ಲೆಸೆದು ಕೊಲ್ಲಬೇಕು ಅದರ ಮಾಂಸವನ್ನು ತಿನ್ನಬಾರದು. ಆದರೆ ಎತ್ತಿನ ಯಜಮಾನನು ನಿರಪರಾಧಿಯಾಗಿರಬೇಕು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 21

26ಇದಲ್ಲದೆ ಒಬ್ಬನು ದಾಸನ ಕಣ್ಣನ್ನು ಇಲ್ಲವೆ ದಾಸಿಯ ಕಣ್ಣನ್ನು ಹೊಡೆದು ನಷ್ಟಪಡಿಸಿದರೆ ಆ ಕಣ್ಣಿಗೋಸ್ಕರ ಅವನನ್ನು ಬಿಡುಗಡೆಮಾಡಿ ಅವನು ಕಳುಹಿಸಲಿ.

27ಒಬ್ಬನು ದಾಸನ ಹಲ್ಲನ್ನು ಇಲ್ಲವೆ ದಾಸಿಯ ಹಲ್ಲನ್ನು ಉದುರಿಸಿದರೆ ಹಲ್ಲಿಗೋಸ್ಕರ ಅವನನ್ನು ಬಿಡುಗಡೆಮಾಡಿ ಕಳುಹಿಸಲಿ.

28ಇದಲ್ಲದೆ ಯಾವದಾದರೂ ಒಂದು ಎತ್ತು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಹಾದು ಕೊಂದರೆ ಆ ಎತ್ತನ್ನು ಖಂಡಿತವಾಗಿ ಕಲ್ಲೆಸೆದು ಕೊಲ್ಲಬೇಕು ಅದರ ಮಾಂಸವನ್ನು ತಿನ್ನಬಾರದು. ಆದರೆ ಎತ್ತಿನ ಯಜಮಾನನು ನಿರಪರಾಧಿಯಾಗಿರಬೇಕು.

29ಆದರೆ ಆ ಎತ್ತು ಮೊದಲಿನಿಂದ ಹಾಯುವಂಥದ್ದೆಂದು ಯಜಮಾನನಿಗೆ ತಿಳಿದಿದ್ದರೂ ಅವನು ಅದನ್ನು ಭದ್ರಮಾಡದೆ ಇದ್ದದರಿಂದ ಅದು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಕೊಂದುಹಾಕಿದರೆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು; ಅದರ ಯಜಮಾನನೂ ಸಾಯಬೇಕು.

30ಒಂದು ವೇಳೆ ಅವನಿಗೆ ಪ್ರಾಯಶ್ಚಿತ್ತವನ್ನು ನೇಮಿ ಸಿದರೆ ಅವನು ತನಗೆ ನೇಮಿಸಿದ್ದನ್ನು ತನ್ನ ಪ್ರಾಣ ವಿಮೋಚನೆಗಾಗಿ ಕೊಡಲಿ.

ವಿಮೋಚನಕಾಂಡ 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी