ಯೋಹಾನನು 10:14

ನಾನೇ ಒಳ್ಳೇ ಕುರುಬನು; ನನ್ನ ಕುರಿಗಳನ್ನು ನಾನು ಬಲ್ಲೆನು. ನನ್ನ ಕುರಿಗಳು ನನ್ನನ್ನು ತಿಳಿದವೆ.

ಸಂದರ್ಭದೊಂದಿಗೆ ಓದಿ · ಯೋಹಾನನು 10

12ಆದರೆ ಕೂಲಿಯವನು ಕುರುಬನಲ್ಲವಾದದ ರಿಂದಲೂ ಕುರಿಗಳು ತನ್ನವುಗಳಲ್ಲವಾದದರಿಂದಲೂ ತೋಳ ಬರುವದನ್ನು ಕಂಡು ಕುರಿಗಳನ್ನು ಬಿಟ್ಟು ಓಡಿ ಹೋಗುತ್ತಾನೆ; ಆಗ ತೋಳವು ಕುರಿಗಳನ್ನು ಹಿಡಿದು ಕೊಂಡು ಅವುಗಳನ್ನು ಚದರಿಸುತ್ತದೆ.

13ಕೂಲಿಯವನು ಕೂಲಿಯವನೇ ಆಗಿರುವದರಿಂದ ಕುರಿಗಳಿಗೋಸ್ಕರ ಚಿಂತಿಸದೆ ಓಡಿ ಹೋಗುತ್ತಾನೆ.

14ನಾನೇ ಒಳ್ಳೇ ಕುರುಬನು; ನನ್ನ ಕುರಿಗಳನ್ನು ನಾನು ಬಲ್ಲೆನು. ನನ್ನ ಕುರಿಗಳು ನನ್ನನ್ನು ತಿಳಿದವೆ.

15ತಂದೆಯು ನನ್ನನ್ನು ತಿಳಿದಿರುವಂತೆ ನಾನು ತಂದೆಯನ್ನು ತಿಳಿದಿರುತ್ತೇನೆ; ಕುರಿಗಳಿಗೋಸ್ಕರ ನನ್ನ ಪ್ರಾಣವನ್ನು ಕೊಡುತ್ತೇನೆ.

16ಇದಲ್ಲದೆ ಈ ಹಟ್ಟಿಗೆ ಸೇರದ ಬೇರೆ ಕುರಿಗಳು ನನಗುಂಟು; ಅವುಗಳನ್ನು ಸಹ ನಾನು ತರಬೇಕು ಮತ್ತು ಅವು ನನ್ನ ಸ್ವರಕ್ಕೆ ಕಿವಿಗೊಡುವವು; ಆಗ ಒಂದೇ ಹಿಂಡು ಆಗುವದು ಮತ್ತು ಒಬ್ಬನೇ ಕುರುಬನು ಇರುವನು.

ಯೋಹಾನನು 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी