ನಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮನ ಮೂಲಕ ನಿನಗೆ ಒಪ್ಪಿಸಲ್ಪಟ್ಟ ಆ ಒಳ್ಳೇದನ್ನು ನೀನು ಕಾಪಾಡು.
12ಇದರ ನಿಮಿತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ಯಾಕಂ ದರೆ ನಾನು ನಂಬಿರುವಾತನನ್ನು ಬಲ್ಲೆನು, ನಾನು ಆತನಿಗೆ ಒಪ್ಪಿಸಿದ್ದನ್ನು ಆತನು ಆ ದಿನಕ್ಕಾಗಿ ಕಾಪಾಡು ವದಕ್ಕೆ ಶಕ್ತನಾಗಿದ್ದಾನೆಂದೂ ದೃಢವಾಗಿ ನಂಬಿದ್ದೇನೆ.
13ನೀನು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯೂ ಪ್ರೀತಿಯೂ ಉಳ್ಳವನಾಗಿ ನನ್ನಿಂದ ಕೇಳಿದ ಸ್ವಸ್ಥ ವಾಕ್ಯಗಳ ಕ್ರಮವನ್ನು ಬಿಗಿಯಾಗಿ ಹಿಡಿದುಕೋ.
14ನಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮನ ಮೂಲಕ ನಿನಗೆ ಒಪ್ಪಿಸಲ್ಪಟ್ಟ ಆ ಒಳ್ಳೇದನ್ನು ನೀನು ಕಾಪಾಡು.
15ಆಸ್ಯ ಸೀಮೆಯಲ್ಲಿರುವವರೆಲ್ಲರೂ ನನ್ನನ್ನು ಬಿಟ್ಟು ಹೋದರೆಂಬದನ್ನು ನೀನು ಬಲ್ಲೆ; ಅವರಲ್ಲಿ ಫುಗೇಲನೂ ಹೆರ್ಮೊಗೇನನೂ ಸೇರಿದ್ದಾರೆ.
16ಒನೇಸಿಫೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ. ಯಾಕಂದರೆ ಅವನು ಅನೇಕಾ ವರ್ತಿ ನನ್ನನ್ನು ಉತ್ತೇಜನ ಪಡಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ