ಆಮೋಸ 3:9

ಅಷ್ಡೋದಿನ ಅರಮನೆಗಳಲ್ಲಿ ಐಗುಪ್ತದೇಶದ ಅರಮನೆಗಳಲ್ಲಿ ಹೀಗೆ ಸಾರಿ ಹೇಳಿರಿ--ಸಮಾರ್ಯ ಬೆಟ್ಟಗಳ ಮೇಲೆ ನೀವೆಲ್ಲರೂ ಕೂಡಿಕೊಂಡು ಅದರ ಮಧ್ಯದಲ್ಲಿರುವ ದೊಡ್ಡ ಗದ್ದಲವನ್ನೂ ಅದರ ಮಧ್ಯ ದಲ್ಲಿರುವ ಹೆಚ್ಚಾದ ಹಿಂಸೆಯನ್ನೂ ನೋಡಿರಿ.

ಸಂದರ್ಭದೊಂದಿಗೆ ಓದಿ · ಆಮೋಸ 3

7ನಿಶ್ಚಯ ವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಮರ್ಮ ವನ್ನು ತಿಳಿಸದೆ ಕರ್ತನಾದ ದೇವರು ಏನನ್ನೂ ಮಾಡು ವದಿಲ್ಲ.

8ಸಿಂಹವು ಗರ್ಜಿಸಿದರೆ ಭಯಪಡದೆ ಇರುವ ವರು ಯಾರು? ಕರ್ತನಾದ ದೇವರು ಮಾತನಾಡಿದರೆ ಅದನ್ನು ಪ್ರವಾದಿಸದೆ ಇರುವವರು ಯಾರು?

9ಅಷ್ಡೋದಿನ ಅರಮನೆಗಳಲ್ಲಿ ಐಗುಪ್ತದೇಶದ ಅರಮನೆಗಳಲ್ಲಿ ಹೀಗೆ ಸಾರಿ ಹೇಳಿರಿ--ಸಮಾರ್ಯ ಬೆಟ್ಟಗಳ ಮೇಲೆ ನೀವೆಲ್ಲರೂ ಕೂಡಿಕೊಂಡು ಅದರ ಮಧ್ಯದಲ್ಲಿರುವ ದೊಡ್ಡ ಗದ್ದಲವನ್ನೂ ಅದರ ಮಧ್ಯ ದಲ್ಲಿರುವ ಹೆಚ್ಚಾದ ಹಿಂಸೆಯನ್ನೂ ನೋಡಿರಿ.

10ತಮ್ಮ ಅರಮನೆಗಳಲ್ಲಿ ಬಲಾತ್ಕಾರವನ್ನೂ ಕೊಳ್ಳೆಯನ್ನೂ ನಿಕ್ಷೇಪವಾಗಿ ಕೂಡಿಸಿಕೊಂಡಿರುವವರು ನ್ಯಾಯವಾದ ದ್ದನ್ನು ಮಾಡುವದಕ್ಕೆ ಅವರಿಗೆ ತಿಳಿಯುವದಿಲ್ಲ ಎಂದು ಕರ್ತನು ಹೇಳುತ್ತಾನೆ.

11ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ವಿರೋಧಿಯು ದೇಶದ ಸುತ್ತಲೂ ಇರುವನು; ನಿನ್ನಲ್ಲಿರುವ ನಿನ್ನ ಬಲವನ್ನು ತಗ್ಗಿಸುವನು; ನಿನ್ನ ಅರಮನೆಗಳು ಸೂರೆಯಾಗುವವು.

ಆಮೋಸ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी