ಯೆಹೆಜ್ಕೇಲನು 14:18

ಈ ಮೂವರು ಅದರೊಳ ಗಿದ್ದರೂ ಅವರು ಕುಮಾರರನ್ನಾದರೂ ಕುಮಾರ್ತೆ ಯರನ್ನಾದರೂ ತಪ್ಪಿಸದೆ, ನನ್ನ ಜೀವದಾಣೆ ತಾವು ಮಾತ್ರ ತಪ್ಪಿಸಿಕೊಳ್ಳುವರು ಎಂದು ದೇವರಾದ ಕರ್ತನು ಹೇಳುವನು;

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 14

16ಈ ಮೂವರು ಮನುಷ್ಯರು ಅದರಲ್ಲಿ ಇದ್ದರೂ ನನ್ನ ಜೀವದಾಣೆ, ಅವರು ಕುಮಾರರ ನ್ನಾಗಲೀ ಕುಮಾರ್ತೆಯರನ್ನಾಗಲೀ ತಪ್ಪಿಸದೆ ತಾವು ಮಾತ್ರ ತಪ್ಪಿಸಿಕೊಳ್ಳುವರು; ಆದರೆ ದೇಶವು ಹಾಳಾಗುವದು ಎಂದು ದೇವರಾದ ಕರ್ತನು ಹೇಳುತ್ತಾನೆ.

17ಇಲ್ಲ ದಿದ್ದರೆ ನಾನು ಆ ದೇಶದ ಮೇಲೆ ಕತ್ತಿಯನ್ನು ತರಿಸಿ --ಕತ್ತಿಯೇ, ಆ ದೇಶದಲ್ಲಿ ಹಾದುಹೋಗು ಎಂದು ಹೇಳಿ, ಅದು ಮನುಷ್ಯರನ್ನೂ ಮೃಗಗಳನ್ನೂ ಅದರೊಳ ಗಿಂದ ಕಡಿದುಬಿಟ್ಟಾಗ

18ಈ ಮೂವರು ಅದರೊಳ ಗಿದ್ದರೂ ಅವರು ಕುಮಾರರನ್ನಾದರೂ ಕುಮಾರ್ತೆ ಯರನ್ನಾದರೂ ತಪ್ಪಿಸದೆ, ನನ್ನ ಜೀವದಾಣೆ ತಾವು ಮಾತ್ರ ತಪ್ಪಿಸಿಕೊಳ್ಳುವರು ಎಂದು ದೇವರಾದ ಕರ್ತನು ಹೇಳುವನು;

19ಇಲ್ಲದಿದ್ದರೆ ನಾನು ಆ ದೇಶದ ಮೇಲೆ ವ್ಯಾಧಿಯನ್ನು ಕಳುಹಿಸಿ, ಅದರ ಮೇಲೆ ನನ್ನ ರೋಷ ವನ್ನು ರಕ್ತದಲ್ಲಿ ಸುರಿದು, ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದುಬಿಟ್ಟರೆ,

20ನೋಹ ದಾನಿ ಯೇಲ ಯೋಬ ಎಂಬವರು ಅದರಲ್ಲಿದ್ದಾಗ್ಯೂ ಅವರು ಮಗನನ್ನಾದರೂ ಮಗಳನ್ನಾದರೂ ತಪ್ಪಿಸದೆ ನನ್ನ ಜೀವ ದಾಣೆ, ತಮ್ಮ ಪ್ರಾಣಗಳನ್ನು ಮಾತ್ರ ನೀತಿಯಿಂದ ತಪ್ಪಿಸುವರು ಎಂದು ದೇವರಾದ ಕರ್ತನು ಹೇಳುತ್ತಾನೆ.

ಯೆಹೆಜ್ಕೇಲನು 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी