ಯೆಹೆಜ್ಕೇಲನು 21:11

ಕೈಗೆ ಸಿದ್ದವಾಗುವಂತೆ ಅವನು ಅದನ್ನು ಮಸೆಯುವದಕ್ಕೆ ಕೊಟ್ಟಿದ್ದಾನೆ; ಕೊಲ್ಲುವವನ ಕೈಗೆ ಕೊಡುವ ಹಾಗೆ ಆ ಕತ್ತಿಗೆ ಹದವನ್ನೂ ಸಾಣೆಯನ್ನೂ ಮಾಡಲಾಗಿದೆ.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 21

9ಮನುಷ್ಯಪುತ್ರನೇ, ಪ್ರವಾದಿಸು ಮತ್ತು ಹೇಳು--ಕರ್ತನು ಹೀಗೆ ಹೇಳುವನೆಂದು ಹೇಳು--ಕತ್ತಿಯು, ಆ ಒಂದು ಕತ್ತಿಯು ಹದಮಾಡ ಲ್ಪಟ್ಟಿದೆ; ಮೆರುಗು ಸಹ ಮಾಡಲ್ಪಟ್ಟಿದೆ;

10ಅದು ಕೊಂದೇ ಕೊಲ್ಲುವ ಹಾಗೆ ಹದಮಾಡಲ್ಪಟ್ಟಿದೆ; ಥಳಥಳಿಸುವ ಹಾಗೆ ಮಸೆಯಲ್ಪಟ್ಟಿದೆ; ಹಾಗಾದರೆ ನಾವು ಸಂತೋಷಪಡಬಹುದೋ? ನನ್ನ ಮಗನ ಕೋಲು ಪ್ರತಿಯೊಂದು ಮರವನ್ನು ತಿರಸ್ಕಾರ ಮಾಡು ತ್ತದೆ.

11ಕೈಗೆ ಸಿದ್ದವಾಗುವಂತೆ ಅವನು ಅದನ್ನು ಮಸೆಯುವದಕ್ಕೆ ಕೊಟ್ಟಿದ್ದಾನೆ; ಕೊಲ್ಲುವವನ ಕೈಗೆ ಕೊಡುವ ಹಾಗೆ ಆ ಕತ್ತಿಗೆ ಹದವನ್ನೂ ಸಾಣೆಯನ್ನೂ ಮಾಡಲಾಗಿದೆ.

12ಮನುಷ್ಯಪುತ್ರನೇ, ಕೂಗು ಮತ್ತು ಗೋಳಾಡು; ಇದು ನನ್ನ ಜನರ ಮೇಲೆಯೂ ಇಸ್ರಾಯೇಲಿನ ಎಲ್ಲಾ ಅಧಿಪತಿಗಳ ಮೇಲೆಯೂ ಇರುವದು; ಕತ್ತಿಯ ಮುಖಾಂತರ ಅಂಜಿಕೆಯು ನನ್ನ ಜನರ ಮೇಲೆ ಬರುವದು. ಆದದರಿಂದ ತೊಡೆಯನ್ನು ಬಡಿದುಕೋ.

13ಇದು ಒಂದು ಶೋಧನೆ; ಕತ್ತಿಯು ತಿರಸ್ಕರಿಸಲ್ಪಟ್ಟಿದ್ದೇ; ಕೋಲು ಸಹ ತಿರಸ್ಕಾರವಾದರೆ ಗತಿಯೇನು? ಅದು ಇನ್ನು ಆಗದು ಎಂದು ದೇವರಾದ ಕರ್ತನು ಹೇಳುತ್ತಾನೆ.

ಯೆಹೆಜ್ಕೇಲನು 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी