ಧರ್ಮೋಪದೇಶಕಾಂಡ 9:23

ಇದಲ್ಲದೆ ಕರ್ತನು ನಿಮ್ಮನ್ನು ಕಾದೇಶ್‌ ಬರ್ನೇಯದಿಂದ ಕಳುಹಿಸುವಾಗ--ನೀವು ಹೋಗಿ ನಾನು ನಿಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿ ಕೊಳ್ಳಿರಿ ಎಂದು ಹೇಳಿದಾಗ ನೀವು ನಿಮ್ಮ ದೇವರಾದ ಕರ್ತನ ಅಪ್ಪಣೆಗೆ ವಿರೋಧವಾಗಿ ತಿರುಗಿಬಿದ್ದು ಆತನನ್ನು ನಂಬಲಿಲ್ಲ, ಆತನ ಮಾತನ್ನು ಕೇಳಲಿಲ್ಲ.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 9

21ಇದಲ್ಲದೆ ನೀವು ಮಾಡಿದ ಪಾಪವಾಗಿರುವ ಆ ಕರುವನ್ನು ತಕ್ಕೊಂಡು ಬೆಂಕಿಯಲ್ಲಿ ಸುಟ್ಟು ತುಳಿದು ಅದು ಧೂಳಿ ನಂತೆ ಪುಡಿಯಾಗುವ ವರೆಗೆ ಚೆನ್ನಾಗಿ ಅರೆದು ಅದರ ಧೂಳನ್ನು ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ನಾನು ಹಾಕಿದೆನು.

22ತಬೇರಾನಲ್ಲಿಯೂ ಮಸ್ಸದಲ್ಲಿಯೂ ಕಿಬ್ರೋತ್‌ ಹತಾವಾದಲ್ಲಿಯೂ ಕರ್ತನಿಗೆ ಕೋಪವನ್ನು ಎಬ್ಬಿಸಿದ ವರಾದಿರಿ.

23ಇದಲ್ಲದೆ ಕರ್ತನು ನಿಮ್ಮನ್ನು ಕಾದೇಶ್‌ ಬರ್ನೇಯದಿಂದ ಕಳುಹಿಸುವಾಗ--ನೀವು ಹೋಗಿ ನಾನು ನಿಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿ ಕೊಳ್ಳಿರಿ ಎಂದು ಹೇಳಿದಾಗ ನೀವು ನಿಮ್ಮ ದೇವರಾದ ಕರ್ತನ ಅಪ್ಪಣೆಗೆ ವಿರೋಧವಾಗಿ ತಿರುಗಿಬಿದ್ದು ಆತನನ್ನು ನಂಬಲಿಲ್ಲ, ಆತನ ಮಾತನ್ನು ಕೇಳಲಿಲ್ಲ.

24ನಾನು ನಿಮ್ಮನ್ನು ತಿಳಿದಂದಿನಿಂದ ನೀವು ಕರ್ತನಿಗೆ ವಿರೋಧವಾಗಿ ತಿರುಗಿಬೀಳುವವರಾಗಿದ್ದಿರಿ.

25ಹೀಗಿರಲಾಗಿ ಕರ್ತನು ನಿಮ್ಮನ್ನು ನಾಶಮಾಡು ತ್ತೇನೆಂದು ಹೇಳಿದ್ದರಿಂದ ನಾನು ಮುಂಚೆ ಬಿದ್ದುಕೊಂಡ ಹಾಗೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಕರ್ತನ ಮುಂದೆ ಬಿದ್ದಿದ್ದೆನು.

ಧರ್ಮೋಪದೇಶಕಾಂಡ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी