ಆಗ ಅಭಿಷಿಕ್ತನಾದ ಯಾಜಕನು ಆ ಹೋರಿ ಯ ರಕ್ತವನ್ನು ತೆಗೆದುಕೊಂಡು ಸಭೆಯ ಗುಡಾರದ ಬಳಿಗೆ ತರಬೇಕು.
3ಜನರು ಪಾಪಮಾಡುವ ಹಾಗೆ ಅಭಿಷಿಕ್ತನಾದ ಯಾಜಕನು ಪಾಪಮಾಡಿದರೆ ಅವನು ತನ್ನ ಪಾಪಕ್ಕಾಗಿ ದೋಷವಿಲ್ಲದ ಒಂದು ಎಳೇ ಹೋರಿಯನ್ನು ಪಾಪದ ಬಲಿಗಾಗಿ ಕರ್ತನಿಗೆ ತರಬೇಕು.
4ಅವನು ಆ ಹೋರಿ ಯನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಎದುರಿಗೆ ತಂದು ತನ್ನ ಕೈಯನ್ನು ಅದರ ತಲೆಯ ಮೇಲಿಟ್ಟು ಆ ಹೋರಿಯನ್ನು ಕರ್ತನ ಮುಂದೆ ವಧಿಸ ಬೇಕು.
5ಆಗ ಅಭಿಷಿಕ್ತನಾದ ಯಾಜಕನು ಆ ಹೋರಿ ಯ ರಕ್ತವನ್ನು ತೆಗೆದುಕೊಂಡು ಸಭೆಯ ಗುಡಾರದ ಬಳಿಗೆ ತರಬೇಕು.
6ಯಾಜಕನು ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ ಕರ್ತನ ಮುಂದೆಯೂ ಪವಿತ್ರ ಸ್ಥಳದ ಪರದೆಯ ಮುಂದೆಯೂ ಆ ರಕ್ತವನ್ನು ಏಳು ಸಾರಿ ಚಿಮುಕಿಸಬೇಕು.
7ಯಾಜಕನು ಸ್ವಲ್ಪ ರಕ್ತವನ್ನು ಸಭೆಯ ಗುಡಾರ ದೊಳಗಿರುವ ಸುವಾಸನೆಯುಳ್ಳ ಧೂಪ ಯಜ್ಞವೇದಿಯ ಕೊಂಬುಗಳಿಗೆ ಕರ್ತನ ಮುಂದೆ ಹಚ್ಚಬೇಕು; ಅಲ್ಲದೆ ಆ ಹೋರಿಯ ಎಲ್ಲಾ ರಕ್ತವನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿರುವ ದಹನಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ