ಸಿಂಹವು ಗರ್ಜಿಸುವ ಪ್ರಕಾರ ಮಹಾಶಬ್ದದಿಂದ ಕೂಗಿದನು. ಅವನು ಕೂಗಿದಾಗ ಏಳು ಗುಡುಗುಗಳು ತಮ್ಮ ಧ್ವನಿಕೊಟ್ಟವು.
1ಮೇಘವನ್ನು ಧರಿಸಿಕೊಂಡಿದ್ದ ಬಲಿಷ್ಠ ನಾದ ಮತ್ತೊಬ್ಬ ದೂತನು ಪರಲೋಕ ದಿಂದ ಇಳಿದು ಬರುವದನ್ನು ನಾನು ಕಂಡೆನು. ಅವನ ತಲೆಯ ಮೇಲೆ ಮಳೆ ಬಿಲ್ಲು ಇತ್ತು; ಅವನ ಮುಖವು ಸೂರ್ಯನಂತಿತ್ತು; ಅವನ ಪಾದಗಳು ಬೆಂಕಿಯ ಕಂಬಗಳಂತಿದ್ದವು;
2ತೆರೆದಿದ್ದ ಒಂದು ಚಿಕ್ಕ ಪುಸ್ತಕವು ಅವನ ಕೈಯಲ್ಲಿ ಇತ್ತು; ಅವನು ತನ್ನ ಬಲಗಾಲನ್ನು ಸಮುದ್ರದ ಮೇಲೆಯೂ ಎಡಗಾಲನ್ನು ಭೂಮಿಯ ಮೇಲೆಯೂ ಇಟ್ಟು
3ಸಿಂಹವು ಗರ್ಜಿಸುವ ಪ್ರಕಾರ ಮಹಾಶಬ್ದದಿಂದ ಕೂಗಿದನು. ಅವನು ಕೂಗಿದಾಗ ಏಳು ಗುಡುಗುಗಳು ತಮ್ಮ ಧ್ವನಿಕೊಟ್ಟವು.
4ಆ ಏಳು ಗುಡುಗುಗಳು ತಮ್ಮ ಧ್ವನಿಕೊಟ್ಟಾಗ ನಾನು ಬರೆಯ ಬೇಕೆಂದಿದ್ದೆನು. ಅದಕ್ಕೆ--ಆ ಏಳು ಗುಡುಗುಗಳು ನುಡಿದವುಗಳನ್ನು ನೀನು ಬರೆಯದೆ ಮುದ್ರಿಸು ಎಂದು ಪರಲೋಕದಿಂದ ಬಂದ ಶಬ್ದವು ನನಗೆ ಹೇಳುವದನ್ನು ಕೇಳಿದೆನು.
5ಅನಂತರ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತಿದ್ದ ದೂತನನ್ನು ನಾನು ಕಂಡೆನು. ಅವನು ತನ್ನ ಕೈಯನ್ನು ಪರಲೋಕದ ಕಡೆಗೆ ಎತ್ತಿ--
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ