ಯೆರೆಮಿಯ 32:22

ಅವರ ತಂದೆಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ಹಾಲೂ ಜೇನೂ ಹರಿಯುವ ದೇಶವಾದ ಈ ದೇಶವನ್ನು ಅವರಿಗೆ ಕೊಟ್ಟಿದ್ದೀ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 32

20ನೀನು ಈ ದಿನದ ವರೆಗೂ ಐಗುಪ್ತ ದೇಶದಲ್ಲಿಯೂ ಇಸ್ರಾ ಯೇಲಿನಲ್ಲಿಯೂ ಮನುಷ್ಯರೊಳಗೆ ಗುರುತುಗಳನ್ನೂ ಲಕ್ಷಣಗಳನ್ನೂ ಇಟ್ಟಿದ್ದೀ; ಇಂದಿನ ಪ್ರಕಾರ ನಿನಗೆ ಹೆಸರನ್ನು ಉಂಟುಮಾಡಿಕೊಂಡಿದ್ದೀ.

21ನಿನ್ನ ಜನರಾದ ಇಸ್ರಾಯೇಲನ್ನು ಗುರುತುಗಳಿಂದಲೂ ಲಕ್ಷಣಗಳಿಂ ದಲೂ ಬಲವಾದ ಕೈಯಿಂದಲೂ ಚಾಚಿದ ತೋಳಿ ನಿಂದಲೂ ಮಹಾಭಯದಿಂದಲೂ ಐಗುಪ್ತದೇಶದೊಳ ಗಿಂದ ಹೊರಗೆ ತಂದಿದ್ದೀ.

22ಅವರ ತಂದೆಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ಹಾಲೂ ಜೇನೂ ಹರಿಯುವ ದೇಶವಾದ ಈ ದೇಶವನ್ನು ಅವರಿಗೆ ಕೊಟ್ಟಿದ್ದೀ.

23ಅವರು ಅದರಲ್ಲಿ ಸೇರಿ ಅದನ್ನು ಸ್ವಾಧೀನಪಡಿಸಿಕೊಂಡರು; ಆದರೆ ಅವರು ನಿನ್ನ ಸ್ವರಕ್ಕೆ ಕಿವಿಗೊಡಲಿಲ್ಲ; ನಿನ್ನ ನ್ಯಾಯಪ್ರಮಾಣದಲ್ಲಿ ನಡಕೊಳ್ಳ ಲಿಲ್ಲ; ಮಾಡಬೇಕೆಂದು ನೀನು ಅವರಿಗೆ ಆಜ್ಞಾಪಿಸಿ ದ್ದನ್ನೆಲ್ಲಾ ಮಾಡಲಿಲ್ಲ. ಆದದರಿಂದ ಈ ಕೇಡನ್ನೆಲ್ಲಾ ಅವರಿಗೆ ಸಂಭವಿಸುವಂತೆ ಮಾಡಿದ್ದೀ.

24ಇಗೋ, ಪರ್ವತಗಳು ಪಟ್ಟಣದ ಬಳಿಗೆ ಅದನ್ನು ಹಿಡಿಯುವ ಹಾಗೆ ಬಂದಿವೆ; ಪಟ್ಟಣವು ಅದಕ್ಕೆ ವಿರೋಧವಾಗಿ ಯುದ್ಧ ಮಾಡುವ ಕಸ್ದೀಯರ ಕೈಯಲ್ಲಿ ಕತ್ತಿ, ಕ್ಷಾಮ, ಜಾಡ್ಯಗಳ ಮೂಲಕವಾಗಿ ಒಪ್ಪಿಸಲ್ಪಟ್ಟಿದೆ; ನೀನು ಹೇಳಿದ್ದು ಉಂಟಾಯಿತು; ಇಗೋ, ನೀನು ಅದನ್ನು ನೋಡುತ್ತೀ.

ಯೆರೆಮಿಯ 32 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी