ವಿಮೋಚನಕಾಂಡ 7:3

ಆದರೆ ನಾನು ಫರೋಹನ ಹೃದಯವನ್ನು ಕಠಿಣಪಡಿಸಿ ನನ್ನ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಐಗುಪ್ತದೇಶದಲ್ಲಿ ಹೆಚ್ಚಿಸುವೆನು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 7

1ಆಗ ಕರ್ತನು ಮೋಶೆಗೆ--ಇಗೋ, ನಿನ್ನನ್ನು ಫರೋಹನಿಗೆ ದೇವರಂತೆ ಮಾಡಿದ್ದೇನೆ; ನಿನ್ನ ಸಹೋದರನಾದ ಆರೋನನ್ನು ನಿನ್ನಗೋಸ್ಕರ ಪ್ರವಾದಿಯನ್ನಾಗಿ ಮಾಡಿದ್ದೇನೆ.

2ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ನೀನು ಮಾತನಾಡಬೇಕು; ಇಸ್ರಾಯೇಲ್‌ ಮಕ್ಕಳನ್ನು ತನ್ನ ದೇಶದೊಳಗಿಂದ ಕಳುಹಿಸಿ ಬಿಡುವ ಹಾಗೆ ನಿನ್ನ ಸಹೋದರನಾದ ಆರೋನನು ಫರೋಹನ ಸಂಗಡ ಮಾತನಾಡಬೇಕು.

3ಆದರೆ ನಾನು ಫರೋಹನ ಹೃದಯವನ್ನು ಕಠಿಣಪಡಿಸಿ ನನ್ನ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಐಗುಪ್ತದೇಶದಲ್ಲಿ ಹೆಚ್ಚಿಸುವೆನು.

4ಆದರೆ ಫರೋಹನು ನಿಮ್ಮ ಮಾತನ್ನು ಕೇಳುವದಿಲ್ಲ; ಆದಾಗ್ಯೂ ನನ್ನ ಕೈಯನ್ನು ಐಗುಪ್ತದ ಮೇಲೆ ಇಟ್ಟು ದೊಡ್ಡ ನ್ಯಾಯತೀರ್ಪು ಗಳಿಂದ ನನ್ನ ಜನರಾದ ಇಸ್ರಾಯೇಲ್‌ ಸೈನ್ಯವನ್ನೆಲ್ಲಾ ಐಗುಪ್ತದೇಶದೊಳಗಿಂದ ಹೊರಗೆ ಬರಮಾಡುವೆನು.

5ನಾನು ಐಗುಪ್ತದ ಮೇಲೆ ನನ್ನ ಕೈಯನ್ನಿಟ್ಟು ಅವರೊಳ ಗಿಂದ ಇಸ್ರಾಯೇಲ್‌ ಮಕ್ಕಳನ್ನು ಹೊರಗೆ ಬರಮಾಡಿ ದಾಗ ನಾನೇ ಕರ್ತನೆಂದು ಐಗುಪ್ತ್ಯರಿಗೆ ತಿಳಿದು ಬರುವದು ಎಂದು ಹೇಳಿದನು.

ವಿಮೋಚನಕಾಂಡ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी