ಯೂದನು 1:5

ನೀವು ಇದನ್ನು ಒಂದು ಸಾರಿ ತಿಳಿದವರಾಗಿದ್ದರೂ ನಾನು ಅದನ್ನೇ ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅದು ಯಾವದಂದರೆ--ಕರ್ತನು (ತನ್ನ) ಪ್ರಜೆಯನ್ನು ಐಗುಪ್ತದೇಶದೊಳಗಿಂದ ರಕ್ಷಿಸಿ ದರೂ ತರುವಾಯ ಅವರೊಳಗೆ ನಂಬದೆ ಹೋದ ವರನ್ನು ಸಂಹಾರ ಮಾಡಿದನು.

ಸಂದರ್ಭದೊಂದಿಗೆ ಓದಿ · ಯೂದನು 1

3ಪ್ರಿಯರೇ, ಹುದುವಾಗಿರುವ ರಕ್ಷಣೆಯ ವಿಷಯ ದಲ್ಲಿ ನಿಮಗೆ ಬರೆಯುವದಕ್ಕೆ ಪೂರ್ಣ ಜಾಗ್ರತೆಯಿಂದ ಪ್ರಯತ್ನಮಾಡುತ್ತಿದ್ದಾಗ ಪರಿಶುದ್ಧರಿಗೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವದು ಅವಶ್ಯವೆಂದು ತೋಚಿತು.

4ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವ ಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಕರ್ತನಾದ ದೇವರನ್ನು ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಈ ಕೆಲವು ಜನರು ರಹಸ್ಯವಾಗಿ ಒಳಗೆ ಹೊಕ್ಕಿದ್ದಾರೆ; ಇವರು ಈ ದಂ

5ನೀವು ಇದನ್ನು ಒಂದು ಸಾರಿ ತಿಳಿದವರಾಗಿದ್ದರೂ ನಾನು ಅದನ್ನೇ ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅದು ಯಾವದಂದರೆ--ಕರ್ತನು (ತನ್ನ) ಪ್ರಜೆಯನ್ನು ಐಗುಪ್ತದೇಶದೊಳಗಿಂದ ರಕ್ಷಿಸಿ ದರೂ ತರುವಾಯ ಅವರೊಳಗೆ ನಂಬದೆ ಹೋದ ವರನ್ನು ಸಂಹಾರ ಮಾಡಿದನು.

6ತಮ್ಮ ಮೊದಲಿನ ಸ್ಥಿತಿಯನ್ನು ಕಾಪಾಡದೆ ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೂತರಿಗೆ ಆತನು ನಿತ್ಯವಾದ ಬೇಡಿಗಳನ್ನು ಹಾಕಿ ಮಹಾ ದಿನದ ತೀರ್ಪಿಗಾಗಿ ಅವರನ್ನು ಕತ್ತಲೆ ಯೊಳಗೆ ಕಾದಿಟ್ಟಿದ್ದಾನೆ.

7ಸೊದೋಮ ಗೊಮೋರ ದವರೂ ಹಾಗೆಯೇ ಅವುಗಳ ಸುತ್ತುಮುತ್ತಣ ಪಟ್ಟಣಗಳವರೂ ಅದೇ ರೀತಿಯಲ್ಲಿ ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು ಅನ್ಯ ಶರೀರವನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ಪ್ರತಿದಂಡನೆಯನ್ನು ಅನುಭವಿಸುತ್ತಾ ಉದಾಹರಣೆಗಾಗಿ ಇಡಲ್ಪಟ್ಟಿದ್ದಾರೆ.

ಯೂದನು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी