೧ ಪೂರ್ವಕಾಲವೃತ್ತಾಂತ 24:4

ಈತಾಮಾರನ ಕುಮಾರರಿಗಿಂತ ಎಲ್ಲಾಜಾರನ ಕುಮಾ ರರಲ್ಲಿ ಮುಖ್ಯಸ್ಥರು ಹೆಚ್ಚಾಗಿದ್ದದರಿಂದ ಅವರು ಹೀಗೆಯೇ ವಿಭಾಗಿಸಲ್ಪಟ್ಟಿದ್ದರು. ಎಲ್ಲಾಜಾರನ ಕುಮಾರ ರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಹದಿನಾರು ಮಂದಿ ಮುಖ್ಯಸ್ಥರು. ಈತಾಮಾರನ ಕುಮಾರರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಎಂಟುಮಂದಿ ಮುಖ್ಯ ಸ್ಥರು.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 24

2ನಾದಾಬನೂ ಅಬೀಹುವೂ ತಮ್ಮ ತಂದೆಗಿಂತ ಮುಂಚೆ ಸತ್ತು ಮಕ್ಕಳಿಲ್ಲದೆ ಇದ್ದದ ರಿಂದ ಎಲ್ಲಾಜಾರನೂ ಈತಾಮಾರನೂ ಯಾಜಕ ಸೇವೆಮಾಡಿದರು.

3ಆದದರಿಂದ ದಾವೀದನು ಎಲ್ಲಾ ಜಾರನ ಮಕ್ಕಳಲ್ಲಿ ಚಾದೋಕನಿಗೂ ಈತಾಮಾರನ ಮಕ್ಕಳಲ್ಲಿ ಅಹೀಮೇಲೆಕನಿಗೂ ಅವರ ಸೇವೆಯಲ್ಲಿರುವ ವಿಚಾರಗಳ ಪ್ರಕಾರ ವರ್ಗಗಳನ್ನು ವಿಭಾಗಿಸಿದನು.

4ಈತಾಮಾರನ ಕುಮಾರರಿಗಿಂತ ಎಲ್ಲಾಜಾರನ ಕುಮಾ ರರಲ್ಲಿ ಮುಖ್ಯಸ್ಥರು ಹೆಚ್ಚಾಗಿದ್ದದರಿಂದ ಅವರು ಹೀಗೆಯೇ ವಿಭಾಗಿಸಲ್ಪಟ್ಟಿದ್ದರು. ಎಲ್ಲಾಜಾರನ ಕುಮಾರ ರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಹದಿನಾರು ಮಂದಿ ಮುಖ್ಯಸ್ಥರು. ಈತಾಮಾರನ ಕುಮಾರರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಎಂಟುಮಂದಿ ಮುಖ್ಯ ಸ್ಥರು.

5ಇವರು ಅವರ ಸಂಗಡ ಬೆರೆತಿದ್ದು ಚೀಟು ಗಳಿಂದ ವಿಭಾಗಿಸಲ್ಪಟ್ಟಿದ್ದರು; ಪರಿಶುದ್ಧ ಸ್ಥಾನದ ಪ್ರಧಾನರೂ ದೈವೀಕ ಕಾರ್ಯಗಳಲ್ಲಿ ಪ್ರಧಾನರೂ ಎಲ್ಲಾಜಾರನ ಕುಮಾರರಿಂದಲೂ ಈತಾಮಾರನ ಕುಮಾರರಿಂದಲೂ ಇದ್ದರು.

6ಇದಲ್ಲದೆ ಲೇವಿಯರಲ್ಲಿ ಒಬ್ಬನಾದಂಥ ನೆತನೇಲನ ಮಗನಾದ ಲೇಖಕನಾ ದಂಥ ಶೆಮಾಯನು ಅರಸನ ಮುಂದೆಯೂ ಪ್ರಧಾನ ಯಾಜಕನಾದ ಚಾದೋಕನು, ಎಬ್ಯಾತಾರನ ಮಗ ನಾದ ಅಹೀಮೆಲೆಕನು, ಯಾಜಕರ ಲೇವಿಯರ ಪಿತೃಗಳ ಮುಖ್ಯಸ್ಥರ ಮುಂದೆಯೂ ಆ ವರ್ಗಗಳ ಪಟ್ಟಿಯನ್ನು ಬರೆದನು. ಎಲ್ಲಾಜಾರ್ಯರ ಒಂದು ವರ್ಗದವರಾದ ನಂತರ ಈತಾಮಾರ್ಯರ ಒಂದು ವರ್ಗದವರು ಸೇವಿಸ ಬೇಕೆಂದು ನೇಮಿಸಿದರು. ಎಲ್ಲಾ ವರ್ಗಗಳ ಸರತಿ ಯನ್ನು ಚೀಟಿನಿಂದಲೇ ಗೊತ್ತುಮಾಡಿದರು.

೧ ಪೂರ್ವಕಾಲವೃತ್ತಾಂತ 24 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी