ಅರಣ್ಯಕಾಂಡ 8:13

ತರುವಾಯ ನೀನು ಲೇವಿಯರನ್ನು ಆರೋನನ ಮುಂದೆಯೂ ಅವನ ಕುಮಾರರ ಮುಂದೆಯೂ ನಿಲ್ಲಿಸಿ ಅವರನ್ನು ಕರ್ತನಿಗೆ ಕಾಣಿಕೆಯಂತೆ ಸಮರ್ಪಿಸಬೇಕು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 8

11ಕರ್ತನ ಸೇವೆಯನ್ನು ಮಾಡುವವರಾಗುವಂತೆ ಆರೋನನು ಇಸ್ರಾಯೇಲ್‌ ಮಕ್ಕಳ ಸಮರ್ಪಣೆಗಾಗಿ ಲೇವಿಯರನ್ನು ಸಮರ್ಪಿಸಬೇಕು.

12ಲೇವಿಯರು ತಮ್ಮ ಕೈಗಳನ್ನು ಆ ಹೋರಿಗಳ ತಲೆಗಳ ಮೇಲೆ ಇಡಬೇಕು. ಆಗ ನೀನು ಲೇವಿಯರಿಗೋಸ್ಕರ ಪ್ರಾಯಶ್ಚಿತ್ತ ಮಾಡುವದಕ್ಕಾಗಿ ಕರ್ತನಿಗೆ ಒಂದನ್ನು ಪಾಪದ ಬಲಿಗಾಗಿಯೂ ಮತ್ತೊಂದನ್ನು ದಹನ ಬಲಿಗಾಗಿಯೂ ಸಮರ್ಪಿಸಬೇಕು.

13ತರುವಾಯ ನೀನು ಲೇವಿಯರನ್ನು ಆರೋನನ ಮುಂದೆಯೂ ಅವನ ಕುಮಾರರ ಮುಂದೆಯೂ ನಿಲ್ಲಿಸಿ ಅವರನ್ನು ಕರ್ತನಿಗೆ ಕಾಣಿಕೆಯಂತೆ ಸಮರ್ಪಿಸಬೇಕು.

14ಹೀಗೆ ನೀನು ಲೇವಿಯರನ್ನು ಇಸ್ರಾಯೇಲ್‌ ಮಕ್ಕಳೊ ಳಗಿಂದ ಪ್ರತ್ಯೇಕಿಸಬೇಕು; ಲೇವಿಯರು ನನ್ನವರಾಗಿರ ಬೇಕು.

15ಅದರ ತರುವಾಯ ಲೇವಿಯರು ಸೇವೆ ಮಾಡುವದಕ್ಕೆ ಸಭೆಯ ಗುಡಾರದೊಳಗೆ ಪ್ರವೇಶಿಸು ವರು, ನೀನು ಅವರನ್ನು ಶುದ್ಧಮಾಡಿ ಕಾಣಿಕೆಯಂತೆ ಸಮರ್ಪಿಸಬೇಕು.

ಅರಣ್ಯಕಾಂಡ 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी