ವಿಮೋಚನಕಾಂಡ 16:3

ಇಸ್ರಾಯೇಲ್‌ ಮಕ್ಕಳು ಅವರಿಗೆ--ನಾವು ಐಗುಪ್ತದೇಶದಲ್ಲಿ ಮಾಂಸದ ಪಾತ್ರೆ ಗಳ ಬಳಿಯಲ್ಲಿ ಕೂತುಕೊಂಡು ಸಾಕಾಗುವಷ್ಟು ರೊಟ್ಟಿ ಯನ್ನು ತಿನ್ನುತ್ತಿದ್ದಾಗ ಕರ್ತನ ಕೈಯಿಂದ ಸತ್ತುಹೋಗಿದ್ದರೆ ಒಳ್ಳೆದಾಗಿತ್ತು. ಈ ಸಭೆಯನ್ನೆಲ್ಲಾ ಸಾಯಿಸುವಂತೆ ನಮ್ಮನ್ನು ಈ ಅರಣ್ಯಕ್ಕೆ ಬರಮಾಡಿದ್ದೀರಿ ಅಂದರು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 16

1ತರುವಾಯ ಇಸ್ರಾಯೇಲ್‌ ಮಕ್ಕಳ ಸಭೆಯೆಲ್ಲಾ ಏಲೀಮಿನಿಂದ ಪ್ರಯಾಣ ಮಾಡಿ ಅವರು ಐಗುಪ್ತದೇಶದಿಂದ ಹೊರಟ ಎರಡ ನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಏಲೀಮಿಗೂ ಸೀನಾಯಿಗೂ ಮಧ್ಯೆ ಇರುವ ಸೀನ್‌ ಅರಣ್ಯಕ್ಕೆ ಬಂದರು.

2ಆಗ ಇಸ್ರಾಯೇಲ್‌ ಮಕ್ಕಳ ಸಭೆಯೆಲ್ಲಾ ಅರಣ್ಯದಲ್ಲಿ ಮೋಶೆಗೂ ಆರೋನನಿಗೂ ವಿರೋಧ ವಾಗಿ ಗುಣುಗುಟ್ಟಿತು.

3ಇಸ್ರಾಯೇಲ್‌ ಮಕ್ಕಳು ಅವರಿಗೆ--ನಾವು ಐಗುಪ್ತದೇಶದಲ್ಲಿ ಮಾಂಸದ ಪಾತ್ರೆ ಗಳ ಬಳಿಯಲ್ಲಿ ಕೂತುಕೊಂಡು ಸಾಕಾಗುವಷ್ಟು ರೊಟ್ಟಿ ಯನ್ನು ತಿನ್ನುತ್ತಿದ್ದಾಗ ಕರ್ತನ ಕೈಯಿಂದ ಸತ್ತುಹೋಗಿದ್ದರೆ ಒಳ್ಳೆದಾಗಿತ್ತು. ಈ ಸಭೆಯನ್ನೆಲ್ಲಾ ಸಾಯಿಸುವಂತೆ ನಮ್ಮನ್ನು ಈ ಅರಣ್ಯಕ್ಕೆ ಬರಮಾಡಿದ್ದೀರಿ ಅಂದರು.

4ಆಗ ಕರ್ತನು ಮೋಶೆಗೆ--ಇಗೋ, ರೊಟ್ಟಿಯನ್ನು ನಿಮಗಾಗಿ ನಾನು ಆಕಾಶದಿಂದ ಸುರಿಸುತ್ತೇನೆ; ಅವರು ನನ್ನ ನ್ಯಾಯಪ್ರಮಾಣದ ಪ್ರಕಾರ ನಡೆದುಕೊಳ್ಳುವರೋ ಇಲ್ಲವೋ ಎಂದು ನಾನು ಅವರನ್ನು ಪರೀಕ್ಷಿಸುವ ಹಾಗೆ ಜನರು ಹೊರಗೆಹೋಗಿ ಪ್ರತಿದಿನ ಆ ದಿನಕ್ಕೆ ಬೇಕಾದ ದ್ದನ್ನು ಕೂಡಿಸಲಿ.

5ಆರನೆಯ ದಿವಸದಲ್ಲಿ ಅವರು ತಂದದ್ದನ್ನು ಸಿದ್ಧಮಾಡುವಾಗ ಪ್ರತಿದಿನದಲ್ಲಿ ಕೂಡಿಸು ವದಕ್ಕಿಂತ ಎರಡರಷ್ಟಾಗಿರುವದು ಎಂದು ಹೇಳಿದನು.

ವಿಮೋಚನಕಾಂಡ 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी